ಶುದ್ಧ ಕುಡಿಯುವ ನೀರಿಗಾಗಿ ಪರದಾಟ:‌ ನೀರಿಗಾಗಿ ಪ್ರಾಣವನ್ನ ಲೆಕ್ಕಿಸದೇ ಬಹುತೇಕ ಬತ್ತಿಹೋಗಿರುವ ಬಾವಿಗಿಳಿದ ದಿಟ್ಟ ಮಹಿಳೆ

ಮುಂಬೈ: ಶುದ್ಧ ಕುಡಿಯುವ ನೀರಿಗಾಗಿ ಮಹಿಳೆಯೊಬ್ಬರು ಬಹುತೇಕ ಬತ್ತಿಹೋಗಿರುವ ನೂರಾರು ಅಡಿಗಳ ಆಳವಾದ ಬಾವಿಗೆ ಇಳಿದು ತಮ್ಮ ಪ್ರಾಣವನ್ನು ಸಹ ಲೆಕ್ಕಿಸದೇ ನೀರು ತರುತ್ತಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ತ್ರಯಂಬಕೇಶ್ವರ ಬಳಿಯ ಮೆಟ್‌‌ರ್ ಹಳ್ಳಿಯಲ್ಲಿ ನಡೆದಿದೆ.‌ ಸದ್ಯ ಈ ವೀಡಿಯೋ ಫುಲ್ ವೈರಲ್ ಆಗುತ್ತಿದೆ.

ಬಾವಿಯಲ್ಲಿ ಅಳವಡಿಸಿರುವ ಚಿಕ್ಕ ಚಿಕ್ಕ ಕಲ್ಲುಗಳ ಸಹಾಯದಿಂದ ಆಳವಾಗಿರುವ ಬಾವಿಗೆ ಇಳಿದ ಮಹಿಳೆ ಒಂದು ಬಿಳಿಯ ಬಣ್ಣದ ಬಕೆಟ್‌ಗೆ ಹಗ್ಗ ಕಟ್ಟಿ ಜೋತು ಬಿಟ್ಟಿದ್ದು ನೀರಿಗಾಗಿ ಬವಣೆ ಪಡುತ್ತಿದ್ದಾರೆ.

ಸಾಮಾನ್ಯವಾಗಿ ಬೇಸಿಗೆಯಲ್ಲಿ, ಭಾರತದ ಅನೇಕ ಭಾಗಗಳು ಬರ ಮತ್ತು ಶಾಖದ ಪರಿಸ್ಥಿತಿಗಳಲ್ಲಿ ತತ್ತರಿಸಿದಾಗ, ಗ್ರಾಮೀಣ ಪ್ರದೇಶಗಳಲ್ಲಿನ ಅನೇಕ ಮಹಿಳೆಯರು ತಮ್ಮ ಕುಟುಂಬಗಳಿಗೆ ನೀರು ತರಲು ತಮ್ಮ ಜೀವವನ್ನು ಪಣಕ್ಕಿಡಬೇಕಾಗುತ್ತದೆ.

ಸದ್ಯ ದೇಶದಲ್ಲಿ ಬೇಸಿಗೆಯ ಸಂದರ್ಭದಲ್ಲಿ ಜನರು ನೀರಿಗಾಗಿ ಯಾವ ರೀತಿ ಬವಣೆ ಪಡುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನೈಜ ನಿದರ್ಶನ ಆಗಿದೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

7 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

17 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago