ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ: ಚಿರತೆ ದಾಳಿಗೆ ಬೆಲೆಬಾಳುವ ಹಸು ಬಲಿ

ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ‌ ಪಡೆದಿದೆ.

ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..

ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸು‌ಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್‌ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.

ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.

ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.

ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ‌.

ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

1 hour ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

12 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

12 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

13 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

14 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

16 hours ago