ತೋಟದ ಮನೆ ಮುಂದೆ ಶೆಡ್ ನಲ್ಲಿದ್ದ ಹಸು ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.
ಹಸುವನ್ನು ಅರೆಬರೆ ತಿಂದು ಹೊತ್ತೊಯ್ಯಲು ಪ್ರಯತ್ನಿಸಿ ಪರಾರಿಯಾಗಿದೆ. ಈ ಘಟನೆ ತಡ ರಾತ್ರಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರೇಪುರ ಗ್ರಾಮದಲ್ಲಿ ನಡೆದಿದೆ..
ರೈತ ರಾಮಸ್ವಾಮಿ ಎಂಬುವವರು ತೋಟದ ಮನೆ ಮುಂದೆ ಶೆಡ್ ನಲ್ಲಿ ಹಸುಕಟ್ಟಿ ಮಲಗಿದ್ದರು. ಏಕಾಏಕಿ ಹಸು ಮೇಲೆ ದಾಳಿ ಮಾಡಿರುವ ಚಿರತೆ ಸುಮಾರು ನೂರು ಮೀಟರ್‌ನಷ್ಟು ಹಸುವನ್ನು ಎಳೆದೊಯ್ದಿದೆ. ಕೂಡಲೆ ಶಬ್ಧ ಕೇಳಿ ಮನೆಯಿಂದ ರೈತರು ಹೊರಬಂದ ಹಿನ್ನೆಲೆ ಚಿರತೆ ಪರಾರಿಯಾಗಿದೆ.
ರೈತ ರಾಮಸ್ವಾಮಿ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಸುಮಾರು ಐವತ್ತು ಸಾವಿರ ರೂಪಾಯಿ ಬೆಲೆ ಬಾಳುವ ಹಸು ಸಾವನ್ನಪ್ಪಿದೆ.
ಚಿರತೆ ಆತಂಕ ಹಿನ್ನೆಲೆ ಗ್ರಾಮಸ್ಥರು ಮಕ್ಕಳು ರಾತ್ರಿ ವೇಳೆ ಸಂಚರಿಸಲು ಭಯಬೀತರಾಗಿದ್ದಾರೆ.
ಈ ಹಿಂದೆ ಕರುವೊಂದನ್ನು ಚಿರತೆ ಹೊತ್ತೊಯ್ದಿದೆ ಎಂದು ರೈತ ರಾಮಸ್ವಾಮಿ ಅಳಲುತೋಡಿಕೊಂಡಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳು ಬೋನ್ ಅಳವಡಿಸಿ ಚಿರತೆ ಸೆರೆ ಹಿಡಿಯಬೇಕು ಎಂದು ಜನ ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…
ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…
ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…
ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…
ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…