ಶೋಭಾಯಾತ್ರೆಯಲ್ಲಿ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆ ಬಳಕೆ ಆರೋಪ: ದಲಿತ ಹಾಗೂ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ದೊಡ್ಡಬಳ್ಳಾಪುರದಲ್ಲಿ ಭಾನುವಾರ ವಿಶ್ವ ಹಿಂದೂ ಪರಿಷತ್‌, ಬಜರಂಗದಳದಿಂದ ನಡೆದ ಶೋಭಾಯಾತ್ರೆಯಲ್ಲಿ ಇತರೆ ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಮುಖಂಡ‌ ಜಿ.ಲಕ್ಷ್ಮೀಪತಿ, ಶೋಭಾಯಾತ್ರೆಗೆ ನಮ್ಮ ವಿರೋಧವಿಲ್ಲ. ಶೋಭಾಯಾತ್ರೆಯಲ್ಲಿ ರಾಮ, ಆಂಜನೇಯ, ಶಿವ ಪ್ರತಿಮೆಗಳ ಜೊತೆ ಅಂಬೇಡ್ಕರ್ ಪ್ರತಿಮೆಯನ್ನು ಮೆರವಣಿಗೆ ಮಾಡಲಾಯಿತು. ಇದಕ್ಕೆ ನಮ್ಮ ತಂಟೆ ತಕರಾರು ಇಲ್ಲ. ಆದರೆ, ಶಿವ, ಶ್ರೀರಾಮ, ಆಂಜನೇಯ ಪ್ರತಿಮೆಗಳು ದೊಡ್ಡದಾಗಿದ್ದು, ಅಂಬೇಡ್ಕರ್ ಪ್ರತಿಮೆ ಮಾತ್ರ ಚಿಕ್ಕದಾಗಿದೆ. ಎಲ್ಲಾ ಪ್ರತಿಮೆಗಳಿಗಿಂತಲೂ ಚಿಕ್ಕದಾಗಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್‌ ಪ್ರತಿಮೆಯನ್ನು ಬಳಸುವ ಮೂಲಕ ಅವಮಾನಿಸಲಾಗಿದ್ದು, ಇದಕ್ಕೆ ನಮ್ಮ ವಿರೋಧವಿದೆ. ಕೂಡಲೇ ಇದಕ್ಕೆ ಸಂಬಂಧಪಟ್ಟವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಶೋಭಾಯಾತ್ರೆಯಲ್ಲಿ ಇತ್ತೀಚೆಗಷ್ಟೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಮೆರವಣಿಗೆಯಲ್ಲಿ‌‌ ಬಳಸಲಾಗುತ್ತಿದೆ. ಇದೂವರೆಗೂ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಅಂಬೇಡ್ಕರ್ ಅವರ ಭಾವಚಿತ್ರ ಇಲ್ಲ. ಇದೀಗ ಇದ್ದಕ್ಕಿದ್ದಾಗೆ ಅಂಬೇಡ್ಕರ್ ಅವರ ಬಗ್ಗೆ ಜ್ಞಾನೋದಯವಾಗಿದೆ. ರಾಮಮಂದಿರ ವಿಚಾರ ಮುಗಿದ ಮೇಲೆ ವೋಟ್ ಬ್ಯಾಂಕ್ ಗಾಗಿ ಅಂಬೇಡ್ಕರ್ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ ಎಂದು ಆರೋಪಿಸಿದರು.

ತುಳಿತಕ್ಕೊಳಗಾದವರನ್ನು ಸಂವಿಧಾನ ಮೂಲಕ ಮೇಲಕ್ಕೆತ್ತಿದ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರೇ ನಮಗೆ ದೇವರು. ನಾವು ಅಂಬೇಡ್ಕರ್ ಅವರನ್ನು ದೇವರೆಂದೇ ಭಾವಿಸಿ ಪೂಜೆ ಮಾಡುತ್ತೇವೆ. ನಾವು ಪೂಜೆ ಮಾಡುವ ದೇವರನ್ನು ಮತಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ನಂತರ ಎಲ್ಲಾ ಮುಖಂಡರು ಸೇರಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು.

ಈ ವೇಳೆ ದಲಿತ ಹಾಗೂ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಅಡ್ಡಾದಿಡ್ಡಿ ಲಾರಿ ಚಾಲನೆ: ವಾಹನ ಸವಾರರಿಗೆ ಕಿರಿಕಿರಿ: ಲಾರಿ ತಡೆದು ಚಾಲಕನಿಗೆ ತರಾಟಗೆ ತೆಗೆದುಕೊಂಡ ಸಾರ್ವಜನಿಕರು

ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…

2 hours ago

ಅಸಂಘಟಿತ ಕಾರ್ಮಿಕರ ಮಂಡಳಿಗೆ ಪೆಟ್ರೋಲ್, ಡೀಸೆಲ್ ಸೆಸ್ ನಲ್ಲಿ ಪಾಲು- ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…

4 hours ago

“ಬದುಕಿನ ಬೆಳದಿಂಗಳು”

ಬದುಕಿನ ಬೆಳದಿಂಗಳಲ್ಲಿ ನಮ್ಮ ಹುರುಪು, ಹುಕುಂಗಳು ಹಾಗೂ ಹಲವು ವಿಭಿನ್ನತೆಗಳ ವಿಚಾರಾರ್ಥಗಳು ನೆನೆಗುದಿಗೆ ಬಿದ್ದಿದ್ದುಂಟು. ಹಾಗೆಯೇ ಸದ್ಗುಣ-ದುರ್ಗುಣಗಳ ವ್ಯತ್ಯಾಸವನು ಅರಿತು…

5 hours ago

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವು

ಕೃಷಿ ಹೊಂಡಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3 ಗಂಟೆಯಲಿ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ…

5 hours ago

ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ…

7 hours ago

ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ತೋಟಗಾರಿಕೆ…

7 hours ago