Categories: ಕೋಲಾರ

ಶೋಷಣೆ, ದಬ್ಬಾಳಿಕೆಯ ಪಿಡುಗು ಹೋಗಲಾಡಿಸುವ ಚಿಂತನೆಗಳು ಬರಬೇಕಾಗಿದೆ-ಎಂಎಲ್ ಸಿ ನಾಗರಾಜ್ ಯಾದವ್

ಕೋಲಾರ: ಸಮಾಜದಲ್ಲಿನ ಶೋಷಣೆ, ದಬ್ಬಾಳಿಕೆಯ ಪಿಡುಗುಗಳನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಇವತ್ತಿನ ಚಿಂತನೆಗಳು ಅವಶ್ಯಕತೆ ಇದ್ದು ಪ್ರತಿಯೊಬ್ಬರೂ ಇದರ ಬಗ್ಗೆ ಯೋಚಿಸಿ ಸಮಾಜವನ್ನು ಸರಿದಾರಿಗೆ ತರಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ತಿಳಿಸಿದರು.

ನಗರದ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ನಿವೃತ್ತ ಪ್ರಾಧ್ಯಾಪಕ ಹಾಗೂ ಸಾಹಿತಿ ಆರ್ ಶಂಕರಪ್ಪ ಅವರಿಗೆ ಅಭಿನಂದನೆ, ಬೀಳ್ಕೊಡುಗೆ ಹಾಗೂ ಕರ್ನಾಟಕ ರಾಜಕೀಯ ಇತಿಹಾಸ ಮತ್ತು ಆಡಳಿತ, ಸ್ಪರ್ಧಾ ದಾರಿದೀಪ ಎರಡು ಕೃತಿಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು ಇವತ್ತು ಒಂದು ಕಡೆ ಶೋಷಣೆ ಮತ್ತೊಂದು ಕಡೆ ಭ್ರಷ್ಟಾಚಾರ ಕೋಮುವಾದವು ಸಮಾಜಕ್ಕೆ ಕಳಂಕ ತಂದಿದೆ ಇದನ್ನು ಹೋಗಲಾಡಿಸಲು ಯುವಜನರಲ್ಲಿ ಅರಿವು ಮುಖ್ಯವಾಗಿದೆ ಇದಕ್ಕೆ ಬರವಣಿಗೆ ಮತ್ತು ಶಿಕ್ಷಣದಿಂದ ಮಾತ್ರ ಸಾಧ್ಯವಾಗುತ್ತದೆ ಎಂದರು.

ಶಿಕ್ಷಕ ವೃತ್ತಿಯಿಂದ ಸಮಾಜದಲ್ಲಿ ಬದಲಾವಣೆಯನ್ನು ತರಲು ಸಾಧ್ಯವಾಗಿದೆ ವಿಧ್ಯಾರ್ಥಿಗಳಿಗೆ ಕೇವಲ ಪಠ್ಯಪುಸ್ತಕಗಳು ಅಷ್ಟೇ ಭವಿಷ್ಯವನ್ನು ರೂಪಿಸುವುದಿಲ್ಲ ಪ್ರೀತಿ ವಿಶ್ವಾಸದಿಂದ ಅವರಿಗೆ ಹೊಣೆಗಾರಿಯ ಜವಾಬ್ದಾರಿಯನ್ನು ವಹಿಸಬೇಕಾಗಿದೆ ಯುವ ಪೀಳಿಗೆ ಇತಿಹಾಸವನ್ನು ತಿಳಿದುಕೊಳ್ಳುವ ಜೊತೆಗೆ ವಿವಿಧ ವಿಚಾರಗಳ ಸಂಶೋಧನೆಗಳ ಕಡೆಗೆ ಗಮನ ಹರಿಸಿ ಸಮಸ್ಯೆಗಳನ್ನು ಪರಿಹಾರ ಮಾಡಬೇಕಾಗಿದೆ ಕೋಲಾರದಲ್ಲಿ ಸರಿ ಸುಮಾರು 75 ವರ್ಷಗಳ ಇತಿಹಾಸವಿರುವ ಬಾಲಕರ ಕಾಲೇಜಿಗೆ ವಿಶೇಷವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರಕಾರದ ಸಿಎಂ.ಡಿಸಿಎಂ ಜೊತೆಗೆ ಚರ್ಚಿಸಿ ಅನುದಾನ ಕೊಡಿಸಲು ಪ್ರಮಾಣಿಕ ಪ್ರಯತ್ನ ಮಾಡತ್ತೇನೆ ಎಂದರು.

ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ವಿವಿ ಕುಲಪತಿ ನಿರಂಜನ್ ವಾನಳ್ಳಿ ಮಾತನಾಡಿ, ಸಮಾಜದಲ್ಲಿ ಪುಸ್ತಕಗಳನ್ನು ಓದುವ ಪ್ರವೃತ್ತಿ ಕಡಿಮೆಯಾಗಿದೆ ಹೊಸ ತಲೆಮಾರಿನ ಜನರು ಜ್ಞಾನದ ಕಡೆಗೆ ಹೆಚ್ಚಿನ ಜವಾಬ್ದಾರಿ ವಹಿಸಬೇಕಾಗಿದೆ ಡಾ.ಶಂಕರಪ್ಪ ನವರು ಸರಕಾರಿ ಸೇವೆಯಿಂದ ಅಷ್ಟೇ ನಿವೃತ್ತಿಯಾಗಿದ್ದಾರೆ ಮುಂದೆ ಅವರು ಬರವಣಿಗೆ ಹೆಚ್ಚಿನ ಸಮಯ ವಹಿಸಲಿದ್ದಾರೆ ಯಾರೇ ಸರಕಾರಿ ನೌಕರರಾಗಿ ನಿವೃತ್ತಿ ಹೊಂದಿದ ದಿನವೇ ಕನಿಷ್ಠ ಅವರಿಗೆ ಸರಕಾರದಿಂದ ಸಿಗುವ ಪಿಂಚಣಿ ಸೇರಿದಂತೆ ಇತರೆ ಸೌಲಭ್ಯಗಳನ್ನು ಕೊಡುವ ಕೆಲಸವನ್ನು ಸಂಬಂಧಿಸಿದ ಇಲಾಖೆ ಮತ್ತು ಸರಕಾರ ಮಾಡಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ.ಶಂಕರಪ್ಪ, ನನ್ನ ಬರವಣಿಗೆ ಮತ್ತು ಪ್ರಾಧ್ಯಾಪಕ ವೃತ್ತಿಯಲ್ಲಿ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ಧನ್ಯವಾದಗಳು ಸಮಾಜಕ್ಕೆ ಏನಾದರೂ ಕೊಡುಗೆಯಾಗಿ ನೀಡಬೇಕು ಎಂದು ಬೋಧನೆಯ ಜೊತೆಗೆ ಬರವಣಿಗೆ ಆಯ್ಕೆ ಮಾಡಿಕೊಂಡಿದ್ದೇನೆ ಸಮಾಜದಲ್ಲಿ ವಿಧ್ಯಾರ್ಥಿಗಳಿಗೆ ಮೌಲ್ಯಾಧಾರಿತ, ನೈತಿಕ, ಜ್ಞಾನ, ಹಾಗೂ ಕಲಿಕೆ ಆಧಾರಿತ ಶಿಕ್ಷಣವನ್ನು ಕಲಿಸಬೇಕು ಮನುಷ್ಯನ ವಿಕಸನಕ್ಕೆ ನಾಲ್ಕು ಮುಖ್ಯ ಅಂಶಗಳಾಗಿವೆ ಎಂದರು,

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ತ್ಯಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಡಾ.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎನ್.ಬಿ ಗೋಪಾಲಗೌಡ, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿವೃತ್ತ ಉಪ ನಿರ್ದೇಶಕ ವೆಂಕಟಾಚಲಪತಿ, ಸಮಾಜಸೇವಕ ಶಬರೀಷ್ ಯಾದವ್, ನಿವೃತ್ತ ಪ್ರಾಂಶುಪಾಲ ಎ.ವಿ ರೆಡ್ಡಿ, ಪ್ರಾಧ್ಯಾಪಕರಾದ ಶ್ರೀನಿವಾಸಮೂರ್ತಿ, ಶಂಕರಪ್ಪ ನವರ ಧರ್ಮಪತ್ನಿ ಉಷಾರಾಣಿ ಮುಂತಾದವರು ಇದ್ದರು

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

6 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

8 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

11 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

12 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

14 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

15 hours ago