ಶೌಚಾಲಯಕ್ಕೆ ಹೋಗಿ ಬರುವಷ್ಟರಲ್ಲಿ ಮಹಿಳೆಯ ಡೈಮಂಡ್ ರಿಂಗ್, 1 ಲಕ್ಷ ನಗದನ್ನ ಕಳ್ಳರು ಕದ್ದು ಪರಾರಿಯಾಗಿರುವ ಘಟನೆ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ -1ರ ನಿರ್ಗಮನ ದ್ವಾರದ ಗೇಟ್ ನಂಬರ್ -1 ಬಳಿಯ ಶೌಚಾಲಯದ ಬಳಿ ನಡೆದಿದೆ.
ಬೆಂಗಳೂರಿನಿಂದ- ಅಹಮದಬಾದ್ ಗೆ ಪ್ರಯಾಣ ಬೆಳಸಿದ ಮಹಿಳೆಯೊಬ್ಬರು ಕೆಐಎಎಲ್ ಬಳಿಯ ಶೌಚಾಲಯಕ್ಕೆ ಹೋಗಿದ್ದರು, ಶೌಚಾಲಯಕ್ಕೆ ಹೋಗುವ ಮುನ್ನ ತಮ್ಮ ಬ್ಯಾಗ್ ನ್ನು ಹೊರಗಿಟ್ಟಿದ್ದರು, ವಾಪಸ್ ಬಂದು ನೋಡಿದಾಗ ಬ್ಯಾಗ್ ನಾಪತ್ತೆಯಾಗಿದೆ, ಬ್ಯಾಗ್ ನಲ್ಲಿದ್ದ ಡೈಮಂಡ್ ರಿಂಗ್, ಒಂದು ಲಕ್ಷ ನಗದು ಕಳವು ಮಾಡಲಾಗಿದೆ.
ಬ್ಯಾಗ್ ನಲ್ಲಿ ಒಂದು ಡೈಮಂಡ್ ರಿಂಗ್ , ಒಂದು ಜೊತೆ ಕಿವಿಯೊಲೆ ಮತ್ತು 1 ಲಕ್ಷ ನಗದು ಹಣ ಇದ್ದು, 3.7 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು 1 ಲಕ್ಷ ನಗದು ಕಳವು ಮಾಡಲಾಗಿದೆ ಎಂದು ಶಾಲೂ ಅಗರ್ವಾಲ್ ಸ್ನೇಹಿತರಾದ ಪ್ರಣವ್ ವಿಠಲ್ ಗಂಭೀರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…