ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆ-2023ರ ಪ್ರಯುಕ್ತ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ, ಪ್ರಕರಣವು 2022 ರ ಆಗಸ್ಟ್ 01 ರಿಂದ 2023 ರ ಜುಲೈ 31 ರೊಳಗೆ ನಡೆದಿರಬೇಕು.
ದಿನಾಂಕ:01.08.2005 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಆರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಲಾಗುತ್ತದೆ.
ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
2023-2024ನೇ ಸಾಲಿನ ಪ್ರಶಸ್ತಿಗಾಗಿ ನಿಗದಿ ಪಡಿಸಿರುವ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧ ಪಟ್ಟ ಜಿಲ್ಲೆಯ ಉಪನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಗೆ 2023 ರ ಸೆಪ್ಟೆಂಬರ್ 15 ರೊಳಗೆ ಸಲ್ಲಿಸತಕ್ಕದ್ದು.
ಅರ್ಜಿಯನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ
ಉಪನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೊಠಡಿ ಸಂಖ್ಯೆ:206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ,ದೇವನಹಳ್ಳಿ ತಾ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ದೂರವಾಣಿ ಸಂಖ್ಯೆ:080-29787445, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ದೇವನಹಳ್ಳಿ-080-27682268, ದೊಡ್ಡಬಳ್ಳಾಪುರ-080-27625228 ಹೊಸಕೋಟೆ-080-27931493, ನೆಲಮಂಗಲ-
080-27722177 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.