ಕೋಲಾರ: ತ್ಯಾಗ ಮತ್ತು ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಮುಸ್ಲಿಮರು ಸೋಮವಾರ ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯಿಂದ ಆಚರಣೆ ಮಾಡಿದರು.
ಕೋಲಾರ ನಗರದ ಕ್ಲಾಕ್ ಟವರ್ ಮತ್ತು ಸಂಗೊಂಡಹಳ್ಳಿಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್, ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಭಾಗವಹಿಸಿ ಶುಭಾಶಯ ಕೋರಿದರು.
ಹಬ್ಬದ ಅಂಗವಾಗಿ ಶ್ವೇತವಸ್ತ್ರ ಧರಿಸಿದ ಮುಸ್ಲಿಮರು, ರಂಗು ರಂಗಿನ ಟೋಪಿಗಳನ್ನು ತೊಟ್ಟು ಪ್ರಾರ್ಥನೆಗೆ ಆಗಮಿಸಿದರು. ಸಾವಿರಾರು ಜನರು ಏಕಕಾಲಕ್ಕೆ ಪ್ರಾರ್ಥನೆ ಸಲ್ಲಿಸುವುದು ಹಬ್ಬದ ವಾಡಿಕೆಯಾಗಿದೆ. ಮುಸ್ಲಿಂ ಸಮುದಾಯದ ಮೌಲ್ವಿಗಳು ಮತ್ತು ಧರ್ಮ ಗುರುಗಳು ನೆರೆದಿದ್ದದವರಿಗೆ ಸಂದೇಶವನ್ನು ನೀಡುವ ಮೂಲಕ ಹಬ್ಬವನ್ನು ಆಚರಿಸಿದರು.
ಪ್ರಾರ್ಥನೆ ಬಳಿಕ ಸಾಮೂಹಿಕವಾಗಿ ಪರಸ್ಪರ ಶುಭಾಶಯಗಳ ವಿನಿಮಯ ಮಾಡಿಕೊಂಡರು. ಸಾಮೂಹಿಕ ಪ್ರಾರ್ಥನೆ ನಡೆಯುವ ರಸ್ತೆಯನ್ನು ವಾಹನಗಳ ಸಂಚಾರದಿಂದ ನಿರ್ಬಂಧಿಸಲಾಗಿತ್ತು. ನಗರದ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಂದಿನಿ ಪ್ರವೀಣ್ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಮೈಲಾಂಡಹಳ್ಳಿ ಮುರಳಿ, ವೈ.ಶಿವಕುಮಾರ್, ನಗರಸಭಾ ಸದಸ್ಯರಾದ ಅಫ್ಸರ್, ಶಫಿ, ಮುಖಂಡರಾದ ಸೈಫ್ ಫಾರೂಕ್, ಮುಸ್ತಫಾ ಸಮುದಾಯದ ಮುಖಂಡರು ಇದ್ದರು,
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…