ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.
ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.
ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.
ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.
ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.
ಈದ್ ಮಿಲಾದ್ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…