ಶ್ರದ್ಧಾಭಕ್ತಿ, ಅದ್ಧೂರಿಯಾಗಿ ಈದ್ ಮಿಲಾದ್ ಆಚರಣೆ

ಮುಸ್ಲಿಂ ಬಾಂಧವರ ಪವಿತ್ರ ಈದ್ ಮಿಲಾದ್ ಹಬ್ಬವನ್ನು ದೊಡ್ಡಬಳ್ಳಾಪುರ ತಾಲೂಕಿನಾದ್ಯಂತ ಶ್ರದ್ಧಾಭಕ್ತಿ, ಸಂಭ್ರಮಗಳಿಂದ ಆಚರಿಸಲಾಯಿತು.

ಶಾಂತಿದೂತ ಮಾನವತಾವಾದಿ ವಿಶ್ವ ಪ್ರವಾದಿ ಮಹಮದ್ ಪೈಗಂಬರ್ ಜನ್ಮ ದಿನಾಚರಣೆ ಅಂಗವಾಗಿ ನಡೆದ ಈದ್ ಮಿಲಾದ್ ಆಚರಣೆಯಲ್ಲಿ ಮುಸ್ಲಿಂ ಬಾಂಧವರು ಪರಸ್ಪರ ಈದ್ ಶುಭಾಶಯಗಳನ್ನು ಕೋರುವ ಮೂಲಕ ಸಂಭ್ರಮಿಸಿದರು.

ಮಸೀದಿಗಳಲ್ಲಿ ಮೌಲೀದ್ ಹಾಗೂ ಕುರಾನ್ ಪಾರಾಯಣ ಆಚರಣೆ ನಡೆಯಿತು. ಮಸೀದಿಗಳ ಸಮೀಪದ ಹಾದಿ ಬೀದಿಗಳಲ್ಲಿ ಹಸಿರುಮಯ ಬ್ಯಾನರ್ ಗಳು, ಬಾವುಟಗಳು, ವಿದ್ಯುತ್ ದೀಪಾಲಂಕಾರಗಳು ರಾರಾಜಿಸುತ್ತಿದ್ದವು.

ಮಸೀದಿಗಳಲ್ಲಿ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ  ನಗರದ ಇಸ್ಲಾಂಪುರ ಜಾಮಿಯಾ ದರ್ಗಾದಿಂದ ಪೈಗಂಬರ್ ಮೆಕ್ಕಾದ ಸ್ಥಬ್ದ ಚಿತ್ರಗಳು, ಮೌಲೀದ್ ಪಾರಾಯಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಪ್ರಪಂಚದ ಸೃಷ್ಟಿಗೆ ಕಾರಣೀಭೂತರಾದ ಪ್ರವಾದಿ ಮುಹಮ್ಮದ್ ಪೈಗಂಬರ್ ಜನ್ಮ ದಿನವಾಗಿ ಈದ್ ಮಿಲಾದ್ ಮಹತ್ವ ಪಡೆದಿದೆ. ಅವರ ಬದುಕು, ನಡೆ-ನುಡಿಗಳು, ಜನರಲ್ಲಿ ತೋರಿದ ಕಾರುಣ್ಯ, ಸಮಾನತೆ, ಸಹೋದರತೆ, ಸಹನೆ, ಏಕತೆ, ದೈವ ಭಕ್ತಿ ಎಲ್ಲವೂ ಅದ್ಭುತ, ಸರ್ವ ಕಾಲದಲ್ಲೂ ಅನುಕರಣೀಯ.

ಈದ್ ಮಿಲಾದ್‍ ದಿನದಂದು ಮಸೀದಿಗಳಲ್ಲಿ ವಿಶೇಷ ಪ್ರವಚನಗಳನ್ನು ಏರ್ಪಡಿಸಿ ಪ್ರವಾದಿಯವರ ಬಗ್ಗೆ ಮಾಹಿತಿಯನ್ನು ಮತ್ತು ಆಚರಿಸುವ ಬಗೆಯನ್ನೂ, ಧರ್ಮಪಾಲನೆಯ ಮಹತ್ವ ಮತ್ತು ಅದನ್ನು ಪಾಲಿಸುವ ಬಗೆಯನ್ನೂ ಪ್ರಚುರಪಡಿಸಲಾಗುತ್ತದೆ.

Ramesh Babu

Journalist

Recent Posts

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

54 minutes ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

7 hours ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

18 hours ago

ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದ ಕಾರ್ಮಿಕರ ಶಾಲೆ: ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಕಾರ್ಮಿಕರಿಗಾಗಿಯೇ ಪ್ರತಿ ತಾಲೂಕಿನಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಶಾಲೆ ತೆರೆಯಲು ಸರ್ಕಾರ ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ…

20 hours ago

ಸಾಗುವಳಿ ಚೀಟಿಗಳ ಅಕ್ರಮ ಮಂಜೂರಾತಿ ಬಯಲು; ಅರ್ಹರಿಗಷ್ಟೇ ಹಕ್ಕು, ಸ್ವಯಂಘೋಷಿತ ಬುದ್ಧಿವಂತರಿಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ನಾಗಮಂಗಲ: ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ತಾಲೂಕಿನಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಬರೋಬ್ಬರಿ 691 ಪ್ರಕರಣಗಳಲ್ಲಿ ಕಾನೂನುಬಾಹಿರವಾಗಿ ಸಾಗುವಳಿ ಚೀಟಿ…

20 hours ago

ಪೋಷಕರ ಗೌರವವೇ ಬದುಕಿನ ಮೊದಲ ಪಾಠ- ಸುರೇಶ್ ಗೌಡ ಬಿ

ದೊಡ್ಡಬಳ್ಳಾಪುರ: ಯುವಕರು ಮೊದಲು ತಂದೆ-ತಾಯಿಯನ್ನು ಗೌರವಿಸುವುದನ್ನು ಕಲಿಯಬೇಕು. ನಂತರ ಪಾಠ-ಪ್ರವಚನಗಳನ್ನು ಕಲಿಯಬೇಕು ಎಂದು ಹೈಕೋರ್ಟ್ ವಕೀಲರಾದ ಸುರೇಶ್ ಗೌಡ ಬಿ.ವಿದ್ಯಾರ್ಥಿಗಳಿಗೆ…

20 hours ago