ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಶ್ರಮಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಅಲ್ಪಸಂಖ್ಯಾತ ಸಮುದಾಯದ ವಿಧವೆ, ವಿಚ್ಚೇದಿತ, ಅವಿವಾಹಿತ ಮಹಿಳೆಯರಿಗೆ ಆರ್ಥಿಕ ಸಬಲೀಕರಣಕ್ಕಾಗಿ ವಿಶೇಷ ಯೋಜನೆಯಡಿ ಸಾಲ ನೀಡಲು ಅರ್ಜಿ ಆಹ್ವಾನಿಸಲಾಗಿದೆ‌.

ಯೋಜನೆಯಡಿ ರೂ.25,000/- ಸಾಲ ಮತ್ತು ರೂ.25,000/- ಸಹಾಯಧನ ಸೇರಿ ಕನಿಷ್ಠ ಒಟ್ಟು ರೂ.50000/- ಕಡಿಮೆ ಇಲ್ಲದಂತೆ ಸಾಲ ಮತ್ತು ಸಹಾಯಧನವನ್ನು ವಿವಿಧ ಆರ್ಥಿಕ ಚಟುವಟಿಕೆಗಳನ್ನು ಕೈಗೆತ್ತಿಕೊಳ್ಳಲು ಒದಗಿಸಲಾಗುವುದು. ಪ್ರತಿ ಫಲಾನುಭವಿಗೆ ರೂ.50,000/- ಸಾಲ ಮತ್ತು ಸಹಾಯಧನ ಮೊತ್ತ ನಿಗದಿಪಡಿಸಲಾಗಿದ್ದು ಯಾವುದೇ ಕಾರಣಕ್ಕೂ ಸಾಲ ಮತ್ತು ಸಹಾಯಧನದ ಮೊತ್ತವನ್ನು ನಿಗದಿಪಡಿಸಿರುವ ಮೊತ್ತಕ್ಕಿಂತ ಕಡಿಮೆ ಮಾಡಬಾರದು.

ಮಾರ್ಗಸೂಚಿಗಳು

1. ಅರ್ಜಿದಾರರು ರಾಜ್ಯದ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು.
2. ಅರ್ಜಿದಾರರು ರಾಜ್ಯದ ಖಾಯಂ ನಿವಾಸಿಯಾಗಿರಬೇಕು.
3. ಅರ್ಜಿದಾರರ ವಯೋಮಿತಿ 18 ರಿಂದ 55 ವರ್ಷಗಳು ಆಗಿರಬೇಕು.
4. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ.3.50 ಲಕ್ಷದೊಳಗಿರಬೇಕು.
5. ಆರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ರಾಜ್ಯ ಕೇಂದ್ರ ಸರ್ಕಾರದ ಉದ್ಯೋಗಿಯಾಗಿರಬಾರದು.
5. ಅರ್ಜಿದಾರರು KMDCಯಲ್ಲಿ ಸುಸ್ತಿದಾರಾಗಿರಬಾರದು.

ಅರ್ಜಿಯನ್ನು ಆನ್ ಲೈನ್ ವೆಬ್ ಸೈಟ್ https://kmdconline.karnataka.gov.in ಮೂಲಕ ದಿನಾಂಕ 22.08.2023 ರಿಂದ 25.09.2023 ರ ಒಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿಗೆ (ರಜಾ ದಿನವನ್ನು ಹೊರತುಪಡಿಸಿ) ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:-ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂ.1599, ವೈ.ಎನ್.ಬಿಲ್ಡಿಂಗ್, ಹೊಸ ಬಸ್ ಸ್ಟಾಂಡ್ ಹಿಂಭಾಗ, ಯಲಹಂಕ ಬೀದಿ, ದೇವನಹಳ್ಳಿ ತಾಲ್ಲೂಕು, ದೂರವಾಣಿ ಕಚೇರಿ: 080-276817867, Gmail: kmdcbrural@gmail.com
ಸಹಾಯವಾಣಿ ಸಂಖ್ಯೆ:-8277799990 (24*7) ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2 thoughts on “ಶ್ರಮ ಶಕ್ತಿ (ವಿಶೇಷ ಮಹಿಳಾ ಯೋಜನೆ) ಯೋಜನೆಯಡಿ ಸಾಲ ಪಡೆಯಲು ಅಲ್ಪಸಂಖ್ಯಾತ ಮಹಿಳೆಯರಿಂದ ಅರ್ಜಿ ಆಹ್ವಾನ

Leave a Reply

Your email address will not be published. Required fields are marked *