ಶ್ರೀಕ್ಷೇತ್ರ ಘಾಟಿ ಸುಬಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆಯ ಹಣ ಎಣಿಕೆ: 75.30.68 ಲಕ್ಷ ಸಂಗ್ರಹ

ಶ್ರೀಕ್ಷೇತ್ರ ಘಾಟಿ ಸುಬಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆಯ ಹಣವನ್ನು ಎಣಿಕೆ ಮಾಡಲಾಗಿದ್ದು, ರೂ.75.30.68 ಲಕ್ಷ ಸಂಗ್ರಹವಾಗಿದೆ.

ಇದರೊಟ್ಟಿಗೆ  76,500 ರೂ. ಮೌಲ್ಯದ 2 ಕೆಜಿ 250 ಗ್ರಾಂ ಬೆಳ್ಳಿ, 18,900 ರೂ. ಮೌಲ್ಯದ 3 ಗ್ರಾಂ 600 ಮಿಲಿ ತೂಕದ ಚಿನ್ನ ಹಾಕುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ಪ್ರಧಾನ ಅರ್ಚಕ ಸುಬ್ರಮಣ್ಯ, ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago