ಶ್ರೀಕ್ಷೇತ್ರ ಘಾಟಿ ಸುಬಹ್ಮಣ್ಯ ದೇಗುಲದಲ್ಲಿ ಹುಂಡಿ ಕಾಣಿಕೆಯ ಹಣವನ್ನು ಎಣಿಕೆ ಮಾಡಲಾಗಿದ್ದು, ರೂ.75.30.68 ಲಕ್ಷ ಸಂಗ್ರಹವಾಗಿದೆ.
ಇದರೊಟ್ಟಿಗೆ 76,500 ರೂ. ಮೌಲ್ಯದ 2 ಕೆಜಿ 250 ಗ್ರಾಂ ಬೆಳ್ಳಿ, 18,900 ರೂ. ಮೌಲ್ಯದ 3 ಗ್ರಾಂ 600 ಮಿಲಿ ತೂಕದ ಚಿನ್ನ ಹಾಕುವ ಮೂಲಕ ಭಕ್ತರು ತಮ್ಮ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಬಂದಿದ್ದ ಭಕ್ತರು ಭಾಗವಹಿಸಿದ್ದು ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜೆಜೆ ಹೇಮಾವತಿ, ಪ್ರಧಾನ ಅರ್ಚಕ ಸುಬ್ರಮಣ್ಯ, ದೇವಾಲಯದ ಸಿಬ್ಬಂದಿ, ಕೆನರಾ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ದೇವರ ದರ್ಶನಕ್ಕೆ ಬಂದಿದ್ದ ಭಕ್ತರ ಸಮ್ಮುಖದಲ್ಲಿ ಕಾಣಿಕೆ ಹುಂಡಿ ಹಣವನ್ನು ಎಣಿಕೆ ಮಾಡಲಾಯಿತು.
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…