ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದು ಪ್ರೊ.ರವಿಕಿರಣ್ ತಿಳಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ‌ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಸ್ಥಳ ಕ್ಷೇತ್ರದಿಂದ ಬರುವ ಅನುದಾನವನ್ನು ಒಕ್ಕೂಟದ ಮೂಲಕ ಸದಸ್ಯರಿಗೆ ಒದಗಿಸಲು ಒಕ್ಕೂಟದ ಪದಾಧಿಕಾರಿಗಳ ಪಾತ್ರ ಮುಖ್ಯ ಎಂದರು.

ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.

ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡ ಸಹಾಯಕ  ಪ್ರಭಂಧಕರಾದ ಮಧುಸೂದನ್, ತಾಲೂಕು ಯೋಜನಾಧಿಕಾರಿ ಸುಧಾ ಭಾಸ್ಕರ್, ಮೇಲ್ವಿಚಾರಕರು, ಕೃಷಿ ಮೇಲ್ವಿಚಾರಕರು, ತಾಲೂಕಿನ 9 ವಲಯದ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ,CSC ಸೇವಾದಾರರು, ಕಚೇರಿ ಸಿಬ್ಬಂದಿ ಹಾಜರಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

5 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

10 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

10 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

15 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago