ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅನೇಕ ಕಾರ್ಯಕ್ರಮಗಳನ್ನು ಸದುಪಯೋಗ ಪಡಿಸಿಕೊಂಡು ಮಾದರಿ ಕುಟುಂಬವನ್ನಾಗಿಸಿಕೊಳ್ಳಬಹುದು. ಯೋಜನೆಯ ಉತ್ತಮ ಮಾರ್ಗದರ್ಶನದೊಂದಿಗೆ ಪ್ರತಿಯೊಬ್ಬ ಸದಸ್ಯ ಆರ್ಥಿಕವಾಗಿ ಸಫಲರಾಗಬಹುದು ಎಂದು ಪ್ರೊ.ರವಿಕಿರಣ್ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ದೊಡ್ಡಬಳ್ಳಾಪುರ ತಾಲ್ಲೂಕು ಇವರ ವತಿಯಿಂದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹತ್ತು ಹಲವಾರು ಕಾರ್ಯಕ್ರಮಗಳನ್ನು ರಾಜ್ಯಾದ್ಯಂತ ಹಲವು ಹಳ್ಳಿಗಳಲ್ಲಿ ಸೇವೆ ಸಲ್ಲಿಸುತ್ತಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಶ್ಲಾಘನೀಯ ಎಂದು ಹಾರೈಸಿದರು.
ಒಕ್ಕೂಟದ ಪದಾಧಿಕಾರಿಗಳ ಜವಾಬ್ದಾರಿ, ನಾಯಕತ್ವ ಗುಣ, ಸಹಕಾರ ಮನೋಭಾವನೆ ಬಗ್ಗೆ ಜಿಲ್ಲಾ ನಿರ್ದೇಶಕರಾದ ಉಮರಬ್ಬ ಪದಾಧಿಕಾರಿಗಳಿಗೆ ತರಬೇತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು H.S ನಾಗೇಶ್(ಕನ್ನಡ ಛಾಯಾಗ್ರಾಹಕ ಸಂಘದ ಅಧ್ಯಕ್ಷರು)ವಹಿಸಿದ್ದರು.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…