ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ ಅಲಂಕಾರ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ನಡೆದವು.
ಜನ್ಮಾಷ್ಟಮಿ ಪ್ರಯುಕ್ತ ರುಕ್ಮಿಣಿ–ಸತ್ಯಭಾಮಾ ಸಮೇತ ಶ್ರೀ ವೇಣುಗೋಪಾಲಸ್ವಾಮಿಗೆ ಕ್ಷೀರಾಭಿಷೇಕ, ಮಹಾಭಿಷೇಕ, ಅಷ್ಟಗಂಧ ಅರ್ಚನೆ, ವಿಷ್ಣು ಸಹಸ್ರನಾಮ ಪಾರಾಯಣ ಪೂರ್ವಕ ತುಳಸಿ ಅರ್ಚನೆ ಹಾಗೂ ಮಹಾನೈವೇದ್ಯ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು.
ದೇವಸ್ಥಾನ ಜೀರ್ಣೋದ್ಧಾರ ಮಂಡಳಿಯ ಸತ್ಯನಾರಾಯಣಪ್ಪ ಮಾತನಾಡಿ, ಸುಮಾರು ಎರಡು ದಶಕಗಳ ಹಿಂದೆ ನಿರ್ಮಾಣಗೊಂಡಿರುವ ಈ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ ರುಕ್ಮಿಣಿ–ಸತ್ಯಭಾಮಾ ಸಮೇತ ಶ್ರೀ ವೇಣುಗೋಪಾಲಕೃಷ್ಣನ ವಿಗ್ರಹವು ವಿಶೇಷ ಮಹತ್ವ ಹೊಂದಿದ್ದು, ಈ ಭಾಗದ ಭಕ್ತರ ಆರಾಧ್ಯ ದೈವವಾಗಿ ಪೂಜಿಸಲ್ಪಡುತ್ತಿದೆ ಎಂದು ಹೇಳಿದರು.
ಜನ್ಮಾಷ್ಟಮಿ ಅಂಗವಾಗಿ ಆಗಮಿಸಿದ್ದ ಭಕ್ತರು ಹಣ್ಣು-ಕಾಯಿ ಸೇವೆ, ಬೆಣ್ಣೆ ಸೇವೆ ಸೇರಿದಂತೆ ವಿವಿಧ ಸೇವೆಗಳನ್ನು ಸಮರ್ಪಿಸಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು. ಆಕರ್ಷಕ ಹೂವಿನ ಅಲಂಕಾರದಿಂದ ಕಂಗೊಳಿಸುತ್ತಿದ್ದ ಶ್ರೀ ವೇಣುಗೋಪಾಲಸ್ವಾಮಿಯ ದರ್ಶನ ಪಡೆದ ಭಕ್ತರಿಗೆ ಪ್ರಸಾದ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀರಂಗವನದ ಶಶಿಧರ್, ದೇವಾಲಯದ ಅರ್ಚಕರಾದ ನವೀನ್ ಸುತ್ತಮುತ್ತಲಿನ ಗ್ರಾಮಸ್ಥರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…
ದೊಡ್ಡಬಳ್ಳಾಪುರ: ಯಲಹಂಕ ಸಮೀಪದ ರಾಜಾನುಕುಂಟೆ ರೈಲ್ವೆ ನಿಲ್ದಾಣದ ಬಳಿ ರೈಲ್ವೆ ಹಳಿಗಳ ಮೇಲೆ ನಿಲ್ಲಿಸಿದ್ದ ಎರಡು ರೈಲು ಬೋಗಿಗಳಿಗೆ ಬೆಂಕಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್ಗಳು…
ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ…
ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ…