ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಗ್ರಾಮಸ್ಥರು ಬಹುತೇಕರು ಅಸ್ಥವ್ಯಸ್ತರಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

200ಕ್ಕೂ ಹೆಚ್ಚು ಗ್ರಾಮಸ್ಥರು ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮದಲ್ಲಿರುವ ಜನರಿಗೆ ಆರೋಗ್ಯ ಸಿಬ್ಬಂದಿಯಿಂದ ಪ್ರಾಥಮಿಕ ಚಿಕಿತ್ಸೆ ನಡೆಸಲಾಗುತ್ತಿದೆ.. ತೀವ್ರ ಅಸ್ತವ್ಯಸ್ಥರಾದವರನ್ನ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಶಿಫ್ಟ್ ಮಾಡಲಾಗುತ್ತಿದೆ..

ಗ್ರಾಮದಲ್ಲಿ ಪ್ರತಿವರ್ಷ ಶ್ರೀರಾಮ ಜಯಂತೋತ್ಸವದ ಅಂಗವಾಗಿ ಅನ್ನಪ್ರಸಾದ ವಿನಿಯೋಗ ನಡೆಯುತ್ತಿತ್ತು. ಈ ವರ್ಷವೇ ಮೊದಲ ಬಾರಿಗೆ ಫುಡ್ ಪಾಯಿಸನ್ ಆಗಿದೆ. ಘಟನೆಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ…

 ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಭೇಟಿ ನೀಡಿ, ಆಸ್ಪತ್ರೆಗೆ ದಾಖಲಾದವರ ಆರೋಗ್ಯ ವಿಚಾರಿಸಿದ್ದಾರೆ.

ಕೆಲವರಿಗೆ ಹೊಟ್ಟೆನೋವು, ವಾಂತಿ-ಬೇಧಿ, ಸುಸ್ತು ಹೆಚ್ಚಾಗಿದೆ. ಗ್ರಾಮದಲ್ಲಿ ಸುಮಾರು 400 ಜನರಿಗೆ ಆರೋಗ್ಯ ಏರುಪೇರಾಗಿದೆ. ಕೆಲವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡ್ತಿದ್ದೀವಿ. ಇನ್ನೂ ಕೆಲವರು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಶಾ ಟೀಂ, ಆರ್ ಆರ್ ಟಿ ಟೀಂ, ಆರೋಗ್ಯ ಸಿಬ್ಬಂದಿ ಮಾನಿಟರ್ ಮಾಡ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಟ್ಟು ಆರೋಗ್ಯ ಸಿಬ್ಬಂದಿ  ಮಾಹಿತಿ ಪಡೆದು ಚಿಕಿತ್ಸೆ ಕೊಡ್ತಿದ್ದಾರೆ ಎಂದು ದೇವನಹಳ್ಳಿ ತಾಲ್ಲೂಕಿನ ಅರದೇಶನಹಳ್ಳಿ ಆಸ್ಪತ್ರೆ ಬಳಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣರೆಡ್ಡಿ ಹೇಳಿಕೆ ನೀಡಿದ್ದಾರೆ..

ಗ್ರಾಮಸ್ಥರು, ದಾರಿಯಲ್ಲಿ ಪ್ರಯಾಣ ಬೆಳೆಸಿರುವ ವ್ಯಕ್ತಿಗಳು, ಅಕ್ಕಪಕ್ಕದ ಗ್ರಾಮಸ್ಥರು ಪ್ರಸಾಧ ಸೇವಿಸಿದ್ದಾರೆ. ಈಗಾಗಲೇ ಅನ್ನ ಪ್ರಸಾದದಲ್ಲಿ ಇದ್ದ ಆಹಾರವನ್ನ ಮತ್ತು ಪದಾರ್ಥಗಳನ್ನ ಟೆಸ್ಟಿಂಗ್ ಕಳಿಸಿದ್ದೇವೆ. ಅಡುಗೆ ತಯಾರಿಕೆಗೆ ಬಳಸಿರುವ ನೀರನ್ನು ಸಹ ಟೆಸ್ಟಿಂಗ್ ಕಳಿಸಿದ್ದೇವೆ. ಒಂದು ದಿನದಲ್ಲಿ ಟೆಸ್ಟಿಂಗ್ ರಿಪೋರ್ಟ್ ಬರಲಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…

Ramesh Babu

Journalist

Recent Posts

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…

4 hours ago

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…

9 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…

10 hours ago

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ…

16 hours ago

ನಾಯಿ ಕಡಿತದ ಸುಳಿಗೆ ಮಕ್ಕಳು: ನಾಲ್ಕು ವರ್ಷದಲ್ಲಿ 4.21 ಲಕ್ಷ ಪ್ರಕರಣ: ರೇಬಿಸ್‌ಗೆ ಮಕ್ಕಳ ಸಾವು

ಬೆಂಗಳೂರು ಗ್ರಾಮಾಂತರ: ಶಾಲೆಗೆ ಹೋಗುವ ದಾರಿ, ಅಂಗನವಾಡಿಯ ಅಂಗಳ, ಆಟವಾಡುವ ಮೈದಾನ... ಹೀಗೆ ಮಕ್ಕಳ ಸುರಕ್ಷಿತ ಬಾಲ್ಯ ಕಳೆಯಬೇಕಾದ ಜಾಗಗಳಲ್ಲೇ…

20 hours ago

ವಿಡಿಯೋ ಕಾಲ್ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

1 day ago