ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ. ಎಲ್. ರಾಹುಲ್ ಗೆ ಬಿಸಿಸಿಐ ಆಯ್ಕೆ ಸಮಿತಿ ಬಿಗ್ ಶಾಕ್ ನೀಡಿದೆ.
ಇತ್ತೀಚೆಗಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ರಾಹುಲ್ ಅವರನ್ನು ಏಕದಿನ ತಂಡದ ಉಪನಾಯಕ ಸ್ಥಾನದಿಂದ ವಜಾಗೊಳಿಸಲಾಗಿದ್ದು ಇದೀಗ ಕೇವಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮದುವೆಯ ಕಾರಣ ನೀಡಿ ರಜೆ ನೀಡುವಂತೆ ಬಿಸಿಸಿಐನ್ನು ಕೋರಿದ್ದ ಕೆ. ಎಲ್. ರಾಹುಲ್ ಅವರಿಗೆ ಜನವರಿ 3- 7 ರವರೆಗೆ ನಡೆಯಲಿರುವ ಟಿ-ಟ್ವೆಂಟಿ ಸರಣಿಯಿಂದ ಕೈಬಿಡಲಾಗಿದ್ದು, ಜನವರಿ 10 – 15 ರವರೆಗೆ ನಡೆಯಲಿರುವ ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ.
ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ, ಟಿ-ಟ್ವೆಂಟಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಉಪನಾಯಕರಾಗಿ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.
ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್.
ಟಿ-ಟ್ವೆಂಟಿ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯ ಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸಾಮ್ಯಸನ್, ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅಶ೯ದೀಪ್ ಸಿಂಗ್, ಹರ್ಷೆಲ್ ಪಟೇಲ್, ಉಮ್ರಾನ್ ಮಲ್ಲಿಕ್, ಶಿವಾಮ್ ಮಾವಿ, ಮುಕೇಶ್ ಕುಮಾರ್.