ಶ್ರೀಲಂಕಾ ವಿರುದ್ಧ ಭಾರತ ತಂಡ ಪ್ರಕಟ : ಕನ್ನಡಿಗ ಕೆ. ಎಲ್. ರಾಹುಲ್ ಗೆ ಶಾಕ್!

ಶ್ರೀಲಂಕಾ ವಿರುದ್ಧ ಜನವರಿ 3 ರಿಂದ ನಡೆಯಲಿರುವ ಮೂರು ಟಿ-ಟ್ವೆಂಟಿ ಹಾಗೂ ಮೂರು ಏಕದಿನ ಪಂದ್ಯಗಳ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು ಕನ್ನಡಿಗ ಕೆ. ಎಲ್. ರಾಹುಲ್ ಗೆ ಬಿಸಿಸಿಐ ಆಯ್ಕೆ ಸಮಿತಿ ಬಿಗ್ ಶಾಕ್ ನೀಡಿದೆ.

ಇತ್ತೀಚೆಗಿನ ಸರಣಿಗಳಲ್ಲಿ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲವಾಗಿರುವ ರಾಹುಲ್ ಅವರನ್ನು ಏಕದಿನ ತಂಡದ ಉಪನಾಯಕ ಸ್ಥಾನದಿಂದ ವಜಾಗೊಳಿಸಲಾಗಿದ್ದು ಇದೀಗ ಕೇವಲ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಆಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಮದುವೆಯ ಕಾರಣ ನೀಡಿ ರಜೆ ನೀಡುವಂತೆ ಬಿಸಿಸಿಐನ್ನು ಕೋರಿದ್ದ ಕೆ. ಎಲ್. ರಾಹುಲ್ ಅವರಿಗೆ ಜನವರಿ 3- 7 ರವರೆಗೆ ನಡೆಯಲಿರುವ ಟಿ-ಟ್ವೆಂಟಿ ಸರಣಿಯಿಂದ ಕೈಬಿಡಲಾಗಿದ್ದು, ಜನವರಿ 10 – 15 ರವರೆಗೆ ನಡೆಯಲಿರುವ ಏಕದಿನ ಸರಣಿಗೆ ಲಭ್ಯರಾಗಲಿದ್ದಾರೆ.

ಏಕದಿನ ಸರಣಿಗೆ ರೋಹಿತ್ ಶರ್ಮಾ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ, ಟಿ-ಟ್ವೆಂಟಿ ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ತಂಡ ಪ್ರಕಟಿಸಲಾಗಿದ್ದು ಉಪನಾಯಕರಾಗಿ ಬ್ಯಾಟ್ಸ್‌ಮನ್ ಸೂರ್ಯ ಕುಮಾರ್ ಯಾದವ್ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್ ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ. ಎಲ್. ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಸಿರಾಜ್, ಉಮ್ರಾನ್ ಮಲ್ಲಿಕ್, ಅಶ೯ದೀಪ್ ಸಿಂಗ್.

ಟಿ-ಟ್ವೆಂಟಿ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯ ಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭ್ ಮನ್ ಗಿಲ್, ದೀಪಕ್ ಹೂಡ, ರಾಹುಲ್ ತ್ರಿಪಾಠಿ, ಸಂಜು ಸಾಮ್ಯಸನ್, ವಾಶಿಂಗ್ಟನ್ ಸುಂದರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅಶ೯ದೀಪ್ ಸಿಂಗ್, ಹರ್ಷೆಲ್ ಪಟೇಲ್, ಉಮ್ರಾನ್ ಮಲ್ಲಿಕ್, ಶಿವಾಮ್ ಮಾವಿ, ಮುಕೇಶ್ ಕುಮಾರ್.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

20 minutes ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

10 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

23 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago