ಶ್ರೀ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಹಿತ್ಯ ಸಂವಾದ

ಆಧುನಿಕ ಮಾಧ್ಯಮಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಪುಸ್ತಕದ ಓದು ನೀಡುವ ಆತ್ಮೀಯ ಭಾವ ಅನನ್ಯವಾಗಿಯೇ ಉಳಿದಿದೆ ಎಂದು ಕವಯತ್ರಿ ಮಂಜುಳಾ ಹುಲಿಕುಂಟೆ ಹೇಳಿದರು.

ಇಲ್ಲಿನ ಕೊಂಗಾಡಿಯಪ್ಪ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಹಾಗೂ ಅರಿವು ಸಾಹಿತ್ಯ ವೇದಿಕೆಯ ನೇತೃತ್ವದಲ್ಲಿ ನಡೆದ ಸಾಹಿತ್ಯ ಚರ್ಚೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಅಭಿರುಚಿಯ ಆಯಾಮಗಳು ಭಿನ್ನವಾಗಿರುತ್ತವೆ. ಸಮಕಾಲೀನ ಬರೆಹಗಾರರ ಬರೆಹಗಳು ಅವರನ್ನು ತಲುಪಬೇಕು. ಕೃತಕ ಬುದ್ದಿಮತ್ತೆಯ ಯುಗದಲ್ಲಿ ಸೃಜನಶೀಲತೆಯೂ ಸರಕಾಗುತ್ತಿದೆ. ಆದರೆ ಮನುಷ್ಯ ಸಂವೇದನೆಯನ್ನು ಪ್ರಜ್ಞಾಪೂರ್ವಕವಾಗಿ ಬಳಸಿಕೊಳ್ಳುವ ಕೆಲಸ ಆಗಬೇಕು. ಬದಲಾಗುತ್ತಿರುವ ಸಾಮಾಜಿಕ ಸಂದರ್ಭಗಳಲ್ಲಿ ಸಾಹಿತ್ಯದ ಪ್ರಭಾವ ಹಾಗೂ ಔಚಿತ್ಯದ ಕುರಿತು ಅಕಾಡೆಮಿಕ್‌ ಆದ ಚರ್ಚೆಗಳು ಅಗತ್ಯ. ಎಲ್ಲ ಕಾಲಕ್ಕೂ ಸಲ್ಲುವ ಮತ್ತು ಎಲ್ಲರನ್ನೂ ಒಳಗೊಳ್ಳುವ ಚಿಂತನೆಗಳ ಬಗ್ಗೆ ಮರು ವಿಮರ್ಶೆ ಅಗತ್ಯವಿದೆ ಎಂದರು.

*ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ಜತೆಗಾರ:*

ಸಾಹಿತ್ಯ ಸಂವೇದನೆಯ ಒಳನೋಟಗಳ ಕುರಿತು ಮಾತನಾಡಿದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ರವಿಕಿರಣ್ ಕೆ.ಆರ್, ಸಾಹಿತ್ಯದ ಓದು ವ್ಯಕ್ತಿಯನ್ನು ಎಂದಿಗೂ ಏಕಾಂಗಿಯಾಗಿರಲು ಬಿಡುವುದಿಲ್ಲ. ಸಾಹಿತ್ಯ ಸಂವೇದನಾಶೀಲ ವ್ಯಕ್ತಿತ್ವದ ನೈಜ ಜತೆಗಾರನಿದ್ದಂತೆ. ಭಾವನೆಗಳ ಅನನ್ಯತೆ ಅರಿತರೆ ಸಂಬಂಧಗಳ ಮಹತ್ವ ತಿಳಿಯುತ್ತದೆ. ಸಾಹಿತ್ಯ ಗತಕಾಲದ ಸರಕು ಮಾತ್ರವಾಗದೆ, ಸಮಾಜ ಹಾಗೂ ವರ್ತಮಾನದ ಕುರಿತ ಆಲೋಚನೆಗಳ ಜೊತೆಗೆ ಭವಿಷ್ಯದ ಬಗೆಗಿನ ಎಚ್ಚರಗಳನ್ನೂ ಒಳಗೊಂಡಿರುತ್ತದೆ ಎಂದರು.

ಯುವ ಮನಸ್ಸುಗಳಲ್ಲಿ ಮೂಡುವ ರಸಭಾವಗಳಿಗೆ ಅಕ್ಷರದ ರೂಪ ದೊರೆಯಬೇಕು. ಅನ್ನಿಸಿದ್ದನ್ನು ಹೇಳಿಬಿಡುವ ಮುಕ್ತತೆ ಸಾಹಿತಿಗೆ ಅಗತ್ಯ. ಕನ್ನಡದ ನಾಳೆಗಳ ಬಗ್ಗೆ ಚಿಂತಿಸುವ ಜತೆಗೆ ಸಶಕ್ತ ಚಿಂತನೆಗಳನ್ನು ಪ್ರಚೋದಿಸಿ, ಮಾನವೀಯ ಆಲೋಚನೆಗಳಿಗೆ ಮುಖಾಮುಖಿಯಾಗಿಸುವ ಪ್ರಕ್ರಿಯೆ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರವೀಣ್‌ ತಳಗವಾರ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಾಹಿತ್ಯದ ಓದು ಮತ್ತು ಗ್ರಹಿಕೆಯ ಅರಿವು ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಸಾಹಿತ್ಯಿಕ ಚರ್ಚೆಗಳು ಹೆಚ್ಚು ಮಹತ್ವ ಪಡೆದಿವೆ ಎಂದರು.

ಪ್ರಾಂಶುಪಾಲ ಪ್ರೊ.ಆರ್.ಎನ್.ಪಂಚಾಕ್ಷರಯ್ಯ ಅಧ್ಯಕ್ಷತೆ ವಹಿಸಿದ್ದರು. ಮಂಜುಳಾ ಹುಲಿಕುಂಟೆ ಹಾಗೂ ಪ್ರೊ.ಕೆ.ಆರ್.ರವಿಕಿರಣ್ ತಮ್ಮ ಸ್ವರಚಿತ ಕವನಗಳನ್ನು ವಾಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಾಹತ್ಯ ಸಂವಾದ ನಡೆಯಿತು.

ಕನ್ನಡ ವಿಭಾಗದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

2 hours ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

3 hours ago

ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದ ಪಾಪಿ ಪುತ್ರ

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…

4 hours ago

ವಿ. ಶಾಂತಕುಮಾರ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…

8 hours ago

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ

ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…

9 hours ago

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

9 hours ago