ಶ್ರೀ ಕ್ಷೇತ್ರ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ‌ಯ ಮೊದಲ ಅದ್ಧೂರಿ ಜಾತ್ರಾ ಮಹೋತ್ಸವ

ಕಾಮೇನಹಳ್ಳಿ(ದೊಡ್ಡಬಳ್ಳಾಪುರ): ತಾಲೂಕಿನ ಸಾಸಲು ಹೋಬಳಿಯಲ್ಲಿನ ಕಾಮೇನಹಳ್ಳಿಯ ಇತಿಹಾಸ ಪ್ರಸಿದ್ಧ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಸನ್ನಿಧಿಯಲ್ಲಿ ರಥೋತ್ಸವ ಇಂದು ವಿಜೃಂಭಣೆಯಿಂದ ಜರುಗಿತು.

ಲಕ್ಷ್ಮೀನರಸಿಂಹ ಸ್ವಾಮಿಯ ಉತ್ಸವ ಮೂರ್ತಿ ಹೊತ್ತ ರಥವನ್ನು ಜಯಘೋಷಣೆಗಳೊಂದಿಗೆ‌ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ, ಸ್ವಸ್ಥಾನಕ್ಕೆ ತಂದು ನಿಲ್ಲಿಸಲಾಯಿತು. ನಂತರ 12.05 ನಿಮಿಷಕ್ಕೆ ಸರಿಯಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿಯ ಜಯಘೋಷಣೆಗಳನ್ನು ಕೂಗುವುದರ ಮೂಲಕ ರಥವನ್ನು ಎಳೆಯಲಾಯಿತು. ಉತ್ಸವ ಮೂರ್ತಿ ಹೊತ್ತ ತೇರಿಗೆ ಭಕ್ತರು ಭಕ್ತಿಯಿಂದ ಬಾಳೆಹಣ್ಣು, ದವನ ಸಮರ್ಪಿಸಿ ಭಕ್ತಿ‌ ಮೆರೆದರು.

ಇದೇ ಮೊದಲ ಬಾರಿಗೆ ಗುಟ್ಟೆ ಶ್ರೀ ಲಕ್ಷ್ಮೀ ನರಸಿಹ ಸ್ವಾಮಿ ರಥೋತ್ಸವ ಹಿನ್ನೆಲೆ ದೇವರಿಗೆ ವಿಶೇಷ ಪೂಜೆ ಪುನಸ್ಕಾರ ನೆರವೇರಿಸಲಾಗಿತ್ತು. ವಿವಿಧ ಜಿಲ್ಲೆಗಳು, ಅಕ್ಕಪಕ್ಕದ ತಾಲೂಕುಗಳಿಂದ ಭಕ್ತ ಸಾಗರ ಹರಿದುಬಂದು ದೇವರ ದರ್ಶನ ಪಡೆದರು.

ಡೊಳ್ಳು ಕುಣಿತ, ಕೀಲುಕುದುರೆ ಕುಣಿತ, ಕಂಸಾಳೆ ನೃತ್ಯ ಪ್ರದರ್ಶನಗಳು ನೋಡುಗರ ಕಣ್ಮನ ಸೆಳೆದವು. ಭಕ್ತ ಗಣಕ್ಕೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ದೊಡ್ಡಬಳ್ಳಾಪುರದಿಂದ ಸುಮಾರು 25ಕಿಮೀ, ಸಾಸಲು ಹಾಗೂ ಆರೂಢಿಯಿಂದ ಸುಮಾರು 7 ಕಿಮೀ ದೂರದಲ್ಲಿರುವ ಗುಟ್ಟೆ ಲಕ್ಷ್ಮೀನರಸಿಂಹಸ್ವಾಮಿ ಧಾರ್ಮಿಕ ಸ್ಥಳವಾಗಿ ಪ್ರಖ್ಯಾತವಾಗಿದ್ದು, ಸುಮಾರು ವರ್ಷಗಳ ಹಿಂದೆ ಸ್ಥಾಪಿತವಾದ ದೇವಸ್ಥಾನ ದಿನೇದಿನೆ ಅಭಿವೃದ್ಧಿಗೊಂಡು ಈಗ ಬೆಟ್ಟದೆ ಮೇಲೆ ಸುಸಜ್ಜಿತ ದೇಗುಲ ಹೊಂದಿದೆ. ಸುಂದರವಾದ ಗೋಪುರ, ಕಲ್ಲು ಮಂಟಪದ ಆವರಣವಿರುವ ಗರ್ಭಗುಡಿಯಲ್ಲಿ ಮೂಲ ವಿಗ್ರಹದೊಂದಿಗೆ ಗುಟ್ಟೆ ಲಕ್ಷ್ಮೀನರಸಿಂಹ ಸ್ವಾಮಿ ಮತ್ತು ಕೆಳಗಡೆ ಲಕ್ಷ್ಮಮ್ಮ ಮತ್ತು ಆಂಜಿನೇಯ ದೇವರುಗಳನ್ನು ಪ್ರತಿಷ್ಠಾಪಿಸಲಾಗಿದೆ.

ಇಲ್ಲಿ ಪ್ರತೀ ಶನಿವಾರ ಪೂಜೆ ಪುನಾಸ್ಕಾರಗಳನ್ನು ನಡೆಸಲಾಗುತ್ತದೆ. ಹುಣ್ಣಿಮೆ ಮತ್ತು ಶ್ರಾವಣ ಮಾಸದಲ್ಲಿ ಪ್ರತಿದಿನ ಪೂಜೆ ಪುರಸ್ಕಾರಗಳು ನಡೆಯಲಿದ್ದು ಸಾವಿರಾರು ಭಕ್ತಾದಿಗಳು ಬಂದು ದೇವರ ಕೃಪೆಗೆ ಪಾತ್ರರಾಗುತ್ತಾರೆ.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

8 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

18 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

1 day ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

1 day ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago