ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಮಾರ್ಗದಲ್ಲಿನ ತಿರುಮಗೊಂಡನಹಳ್ಳಿ ರೈಲ್ವೆ ಗೇಟ್ ಬಳಿ‌ ಮೇಲ್ಸೇತುವೆ ನಿರ್ಮಿಸಲು ಕೋರಿ ಕೇಂದ್ರ ರೈಲ್ವೆ ಸಚಿವರಿಗೆ ಸಂಸದ ಡಾ.ಕೆ.ಸುಧಾಕರ್ ಮನವಿ: ಕೇಂದ್ರ ರೈಲ್ವೆ ಸಚಿವ‌ರಿಂದ ಸಕಾರಾತ್ಮಕ ಸ್ಪಂದನೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ದೊಡ್ಡಬಳ್ಳಾಪುರ ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ದೇವಾಲಯದ ಮಾರ್ಗದಲ್ಲಿನ ತಿರುಮಗೊಂಡನಹಳ್ಳಿ ಬಳಿ ರೈಲ್ವೆ ಗೇಟ್ ಇದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೋರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಅವರು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಶ್ಣವ್ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಕುರಿತು ಪರಿಶೀಲನೆ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಸಚಿವರು ತಿಳಿಸಿದ್ದಾರೆ.

ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯ ಕ್ಷೇತ್ರಕ್ಕೆ ಸಂಪರ್ಕಿಸುವ ರಸ್ತೆಗೆ ಅಡ್ಡವಾಗಿ ರೈಲು ಮಾರ್ಗ ಹಾದು ಹೋಗಿದ್ದು, ರೈಲ್ವೆ ಗೇಟ್ ಬಂದ್ ಮಾಡುವುದರಿಂದ ಕ್ಷೇತ್ರಕ್ಕೆ ಹೋಗುವ ಸಾವಿರಾರು ಭಕ್ತರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಸಮಸ್ಯೆಯನ್ನ ಅನುಭವಿಸುತ್ತಿದ್ದಾರೆ, ಭಕ್ತರ ಅನುಕೂಲಕ್ಕಾಗಿ ತಿರುಮಗೊಂಡನಹಳ್ಳಿಯ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸುವಂತೆ ಸಂಸದ ಡಾ.ಕೆ.ಸುಧಾಕರ್ ಅವರು ದಿನಾಂಕ 05-09-2024ರಂದು ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ರವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

ಬೆಂಗಳೂರು-ದೆಹಲಿ ರೈಲ್ವೆ ಮಾರ್ಗವಾಗಿದ್ದು, ಪ್ರತಿದಿನ 60 ರಿಂದ 70ಕ್ಕೂ ರೈಲುಗಳು ಸಂಚರಿಸುತ್ತವೆ, ಪ್ರತಿ ಅರ್ಧ ಗಂಟೆಗೊಮ್ಮೆ ರೈಲುಗಳು ಸಂಚಾರಿಸುವದರಿಂದ ರೈಲ್ವೆ ಗೇಟ್ ಹಾಕಿ ರಸ್ತೆ ಬಂದ್ ಮಾಡಲಾಗುತ್ತದೆ, ಇದರಿಂದ ಸುಮಾರು 10 ರಿಂದ 15 ನಿಮಿಷ ರೈಲ್ವೆ ಗೇಟ್ ಬಳಿ ಕಾಯಬೇಕಾದ ಸ್ಥಿತಿ ಇದೆ. ರೈಲ್ವೆ ಗೇಟ್ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಿಸಿ ಬೇಕೆಂಬುದು ಸ್ಥಳೀಯರು ಬಹುದಿನದ ಬೇಡಿಕೆಯಾಗಿತ್ತು. ಇದೀಗ ಪ್ರಯಾಣಿಕರ ಅನುಕೂಲಕ್ಕಾಗಿ ಅಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಶ್ಣವ್‌ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ಬಗ್ಗೆ ಸಂಸದ ಡಾ.ಕೆ.ಸುಧಾಕರ್ ಅವರು ಸಚಿವರು ಪ್ರತಿಕ್ರಿಯೆ ನೀಡಿರುವ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Ramesh Babu

Journalist

Recent Posts

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

2 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

10 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

12 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

15 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

16 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

19 hours ago