ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕುಟುಂಬ ಸಮೇತ ಇಂದು ಭೇಟಿ ನೀಡಿದರು.
ಚುನಾವಣಾ ದಿನಾಂಕ ಘೋಷಣೆ ಹಿನ್ನೆಲೆ ಟೆಂಪಲ್ ರನ್ ಮಾಡುತ್ತಿರುವ ಸಿಎಂ ಬೊಮ್ಮಾಯಿ. ದೇವರ ದರ್ಶನ ಪಡೆದು ವಿಶೇಷ ಪೂಜೆ ಪುರಸ್ಕಾರ ನೆರವೇರಿಸಿದರು.
ದೇವರ ದರ್ಶನ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಬಿಡುವು ಸಿಕ್ಕಾಗಲೆಲ್ಲಾ ಘಾಟಿ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಪಡೆಯುತ್ತಿರುತ್ತೇನೆ. ಸಮಸ್ತ ನಾಡಿಗೆ ಒಳಿತಾಗಲೆಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದರು.
ವರುಣಾದಲ್ಲಿ ಪ್ರಬಲವಾದ ಪೈಪೋಟಿ ನೀಡಲಿದ್ದೇವೆ, ಅದರಂತೆ ಅಲ್ಲಿ ವಿಜೇಂದ್ರ ಅವರು ಸ್ಪರ್ಧೆ ಮಾಡಬೇಕು ಎಂದು ಜನರ ಅಭಿಪ್ರಾಯ ಕೇಳಿಬರುತ್ತಿದೆ ಈ ಕುರಿತಾಗಿ ಮಾಜಿ ಸಿಎಂ ಯಡಿಯೂರಪ್ಪ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಹೇಳಿದರು.
ಹಲವು ಸಮೀಕ್ಷೆಗಳ ಪ್ರಕಾರ ನಾವೇ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಮಾತಿಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ನವರು ಹಗಲು ಕನಸು ಕಾಣುತ್ತಿದ್ದಾರೆ
ಈ ಸಮೀಕ್ಷೆಗಳು ಬಹಳ ಹಿಂದೆ ನಡೆದಿರುವುದು, ಚುನಾವಣೆ ಇನ್ನೂ ಒಂದೂವರೆ ತಿಂಗಳು ಬಾಕಿ ಇದೆ. ಈಗ ನಡೆಯುತ್ತಿರುವ ಸಮೀಕ್ಷೆಗಳಲ್ಲಿ ಬಿಜೆಪಿ ಗೆಲ್ಲುವ ಅಂಶಗಳು ಕಂಡುಬರುತ್ತಿದೆ, ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಬಹುಮತ ಪಡೆದು ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುತ್ತೇವೆ ಎಂದು ತಿಳಿಸಿದರು.
ಮೀಸಲಾತಿ ಘೋಷಣೆ ಚುನಾವಣೆ ಗಿಮಿಕ್ ಎಂಬ ವಿರೋಧ ಪಕ್ಷಗಳ ಆರೋಪ ಹಿನ್ನೆಲೆ, ಅವರ ಸರ್ಕಾರದ ಅವಧಿಯಲ್ಲಿ ಮೀಸಲಾತಿ ಏಕೆ ಘೋಷಣೆ ಮಾಡಲಿಲ್ಲ..?
ಅವರು ಮಾಡದೇ ಇರುವ ಕೆಲಸವನ್ನು ನಾವು ಮಾಡಿ ತೋರಿಸಿದ್ದೇವೆ ಎಂದು ಸ್ಪಷ್ಟೀಕರಿಸಿದರು.
ಸಂಭಾವ್ಯ ಅಭ್ಯರ್ಥಿಗಳ ಅಭಿಪ್ರಾಯ ಸಂಗ್ರಹ ಸಭೆ ನಡೆಯುತ್ತಿರುವ ಬಗ್ಗೆ ಮಾತನಾಡಿ ತಳಮಟ್ಟದ ಕ್ಷೇತ್ರ ಮಟ್ಟದ ಪದಾಧಿಕಾರಿಗಳ ಅಭಿಪ್ರಾಯ ಸಂಗ್ರಹ ಮಾಡುತ್ತಿದ್ದು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಪಾರಾಮರ್ಶಿಸಿ ಸಂಸದೀಯ ಮಂಡಳಿಗೆ ಸಲ್ಲಿಸಲಾಗುವುದು ಎಂದರು.
ಅಭ್ಯರ್ಥಿಗಳ ಪಟ್ಟಿ ತಯಾರು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ಇನ್ನೊಂದು ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು