ಈ ವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯ ಈ ದಿನ ಶುಕ್ರವಾರದಂದು ಸಿದ್ಧಿಯೋಗದಲ್ಲಿ ನಾಗರ ಪಂಚಮಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನೆಲ್ಲೆಡೆ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡಿದೆ. ನಾಗ ದೋಷದಿಂದ ಮುಕ್ತಿ ಪಡೆಯಲು ಭಕ್ತರು ನಾಗರ ವಿಗ್ರಹಗಳು, ಹುತ್ತಗಳಿಗೆ ವಿಶೇಷ ಪೂಜೆ ಪುನಸ್ಕಾರ ಮಾಡುವಲ್ಲಿ ನಿರತರಾಗಿದ್ದಾರೆ.
ಅದೇರೀತಿ ನಾಗಾರಾಧನೆಗೆ ಹೆಚ್ಚು ಪ್ರಸಿದ್ಧಿ ಪಡೆದಿರುವ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಸ್ಥಾನದಲ್ಲಿಂದು ನಾಗರ ಪಂಚಮಿ ಪ್ರಯುಕ್ತ ನಾಗರಕಲ್ಲುಗಳು ಹಾಗೂ ಹುತ್ತಗಳಿಗೆ ಹಾಲಿನ ಅಭಿಷೇಕ, ತುಪ್ಪದ ಅಭಿಷೇಕ ಸೇರಿದಂತೆ ಇನ್ನಿತರೆ ವಿಶೇಷ ಪೂಜೆಗಳನ್ನು ನೆರವೇರಿಸಲಾಯಿತು.
ಪ್ರತಿ ವರ್ಷ ನಾಗರಪಂಚಮಿ ದಿನದಂದು ನಾಗರ ಕಲ್ಲುಗಳನ್ನು ಶುದ್ಧ ನೀರಿನಿಂದ ತೊಳೆದು ಅರಿಶಿನ, ಕುಂಕುಮ, ಹೂವಿಟ್ಟು ನಂತರ ನಾಗರ ಕಲ್ಲಿಗೆ ಹಾಲೆರೆದರೆ ಸರ್ಪದೋಷ ನಿವಾರಣೆಯಾಗಲಿದೆ ಎಂಬ ನಂಬಿಕೆ ಹಿನ್ನೆಲೆ ನಾಗ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಗುತ್ತದೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…
ಸ್ಟಿಂಗ್ ಆಪರೇಷನ್ ಮಾಡಿಸುವುದಕ್ಕೆ ಮುಖ್ಯಮಂತ್ರಿಗಳಿಗೆ ತಲೆ ಕೆಟ್ಟಿದೆಯೇ? ಪದೇಪದೇ ಈ ವಿಚಾರದಲ್ಲಿ ಮುಖ್ಯಮಂತ್ರಿಗಳನ್ನು ಎಳೆದು ತರುವ ಎಚ್.ಡಿ. ಕುಮಾರಸ್ವಾಮಿ ಅವರಿಗೆ…