
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಶುಕ್ರವಾರ ಹುಂಡಿ ಕಾಣಿಕೆ ಎಣಿಕೆ ಕಾರ್ಯ ಮಾಡಲಾಗಿದೆ.

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಘಾಟಿ ಸುಬ್ರಹ್ಮಣ್ಯ ದೇವರ ಹುಂಡಿಯಲ್ಲಿ ಹಾಕಲಾಗಿದ್ದ ಕಾಣಿಕೆಯನ್ನು ಎಣಿಕೆ ಮಾಡಲಾಗಿದೆ. ಹುಂಡಿ ಎಣಿಕೆಯಲ್ಲಿ 81 ಲಕ್ಷ 94 ಸಾವಿರ 583 ರೂ. ಸಂಗ್ರಹವಾಗುವ ಮೂಲಕ ಕೋಟಿಯ ಸಮೀಪಕ್ಕೆ ಕಾಣಿಕೆ ಸಂಗ್ರಹ ಬಂದಿದೆ.

ಹುಂಡಿಯ ಎಣಿಕೆ ಕಾರ್ಯದಲ್ಲಿ ಆಡಳಿತ ಮಂಡಳಿ ಪದಾಧಿಕಾರಿಗಳು, ಸಿಬ್ಬಂದಿ, ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.