ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿತ್ತು. ಅದರಂತೆ ಗೋಧೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಗೋ ಪೂಜೆ ನೆರವೇರಿಸಲಾಯಿತು.
ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದಿದ್ದ ರೈತರು, ಅರಿಶಿಣ, ಕುಂಕುಮ ಹಚ್ಚಿ, ಹೂಗಳಿಂದ ಅಲಂಕರಿಸಿ, ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ನೀಡಿ ಗೋ ಪೂಜೆ ಮಾಡಲಾಯಿತು.
ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾದ ಗೋವುಗಳ ಮಹತ್ವ ಸಂರಕ್ಷಣೆಯ ಬಗ್ಗೆ ಜಾಗೃತಿ ಉದ್ದೇಶದಿಂದ ದೇವಾಲಯಗಳಲ್ಲಿ ದೀಪಾವಳಿ ಬಲಿಪಾಡ್ಯಮಿ ದಿನದಂದು ಗೋಧೂಳಿ ಲಗ್ನದಲ್ಲಿ ಗೋವುಗಳಿಗೆ ಗೋಗ್ರಾಸವನ್ನು ನೀಡಿ ಗೋ ಪೂಜೆ ಆಯೋಜಿಸಲಾಗುತ್ತಿದೆ.
ಹಿಂದೂ ಧರ್ಮದಲ್ಲಿ ಗೋವುಗಳಿಗೆ ಮಾತೃ ಸ್ಥಾನವನ್ನು ಕೊಡಲಾಗಿದೆ. ದೀಪಾವಳಿಯ ಸಂದರ್ಭದಲ್ಲಿ ಗೋ ಪೂಜೆ ಅತ್ಯಂತ ಪ್ರಮುಖವಾದ ಪೂಜೆಗಳಲ್ಲೊಂದು. ದೀಪಾವಳಿ ಹಬ್ಬದಲ್ಲಿ ಗೋಪೂಜೆಗೆ ವಿಶೇಷ ಪ್ರಾಧಾನ್ಯತೆ ಇದೆ.
ಗೋ ಮಾತೆಯಲ್ಲಿ 33 ಕೋಟಿ ದೇವಾನುದೇವತೆಗಳು ನೆಲೆಸಿದ್ದಾರೆಂದು ನಂಬಲಾಗುತ್ತದೆ. ಗೋ ಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತವೆ ಎಂಬ ನಂಬಿಕೆ ಇದೆ.
ಈ ವೇಳೆ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ನಾಗರಾಜ್, ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು.