ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ 2024ರ ಜನವರಿ 31ರಂದು ‘ಮಾಂಗಲ್ಯ ಭಾಗ್ಯ’ ಕಾರ್ಯಕ್ರಮ…. ಇನ್ನಷ್ಟು ಮಾಹಿತಿ‌ ಇಲ್ಲಿದೆ….

ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನಗಳಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ 2024ರ ಜನವರಿ 31ರ ಬೆಳಗ್ಗೆ 11:20 ರಿಂದ 12:20ರವರೆಗೆ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.

ಮಾಂಗಲ್ಯ ಭಾಗ್ಯ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ‌ 5 ಸಾವಿರ‌ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು‌ ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.

ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು.

ಮಾಂಗಲ್ಯ ಭಾಗ್ಯ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಅರ್ಜಿಯನ್ನು ದೇವಾಲಯದ ಕಾರ್ಯನಿರ್ವಾಹ ಕಚೇರಿಯಲ್ಲಿ ಪಡೆದು ಜನವರಿ 20ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಿ ನೋಂದಾಸಿಕೊಳ್ಳಬೇಕಾಗಿದೆ.

ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ಜನವರಿ 23ರಂದು ದೇವಾಲಯದಲ್ಲಿ ಪ್ರಕಟಿಸಲಾಗುವುದು. ವಧು-ವರರ ಪಟ್ಟಿಗೆ ಆಕ್ಷೇಪಣೆ ಇದ್ದಲ್ಲಿ ಜ. 25ರೊಳಗಾಗಿ ಸಲ್ಲಿಸಬೇಕಾಗಿದೆ. ಅಂತಿಮ ವಧು-ವರರ ಪಟ್ಟಿಯನ್ನ ಜ.27ರಂದು ಪ್ರಕಟಿಸಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

58 minutes ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

3 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

8 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

11 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago