ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಧಾರ್ಮಿಕ ದತ್ತಿಇಲಾಖೆ ಕುರಿತು ಮಾತನಾಡುವಾಗ ಈ ವಿಷಯ ಪ್ರಸ್ತಾಪಿಸಿದರು. ಅದೇ ರೀತಿ ಹೊರ ರಾಜ್ಯಗಳಲ್ಲಿನ ಪವಿತ್ರ ಪುಣ್ಯಕ್ಷೇತ್ರಗಳಾದ ತಿರುಮಲ, ಶ್ರೀಶೈಲ, ವಾರಣಾಸಿ ಮತ್ತು ಗುಡ್ಡಾಪುರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ವಸತಿ ಸಂಕೀರ್ಣಗಳನ್ನು ನಿರ್ಮಿಸಲಾಗುತ್ತಿದೆ.
ತಿರುಮಲದಲ್ಲಿ 200 ಕೋಟಿ ರೂ.ಗಳ ಕಾಮಗಾರಿ ಅಂತಿಮ ಹಂತದಲ್ಲಿದೆ. ಶ್ರೀಶೈಲದಲ್ಲಿ 85 ಕೋಟಿ ರೂ. ವೆಚ್ಚದಲ್ಲಿ ಮತ್ತು ಗುಡ್ಡಾಪುರದಲ್ಲಿ 11 ಕೋಟಿ ರೂ. ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಸಕ್ತ ಸಾಲಿನಲ್ಲಿ ವಾರಣಾಸಿಯಲ್ಲಿ 5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಮಂತ್ರಾಲಯಕ್ಕೆ ಸಂಪರ್ಕ ಕಲ್ಪಿಸಲು ರಾಯಚೂರಿನ ಚಿಕ್ಕಮಂಚಾಲಿ ಗ್ರಾಮದ ಬಳಿ ಬ್ರಿಡ್ಜ್-ಕಂ-ಬ್ಯಾರೇಜ್ ಅನ್ನು ಲೋಕೋಪಯೋಗಿ ಇಲಾಖೆ ವತಿಯಿಂದ 158 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಯಾವುದೇ ಆದಾಯವಿಲ್ಲದ 34,165 ʻಸಿʼ ವರ್ಗದ ಐತಿಹಾಸಿಕ ದೇವಾಲಯಗಳಲ್ಲಿನ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಮಾಜದ ಗಣ್ಯರು ಮತ್ತು ಸಂಬಂಧಪಟ್ಟ ಇಲಾಖೆಗಳ ಪ್ರತಿನಿಧಿಗಳನ್ನೊಳಗೊಂಡ Vision Group ರಚಿಸಲಾಗುವುದು ಎಂದರು.
ಇನಾಂ/ಇನಾಂಯೇತರ ಜಮೀನು ಕಳೆದುಕೊಂಡಂತಹ 29,523 ʻಸಿʼ ವರ್ಗದ ದೇವಾಲಯಗಳ ಅರ್ಚಕರುಗಳಿಗೆ ಇನ್ನು ಮುಂದೆ ತಸ್ತಿಕ್ ಮೊತ್ತವನ್ನು ಅರ್ಚಕರುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪ್ರಸ್ತಾಪಿಸಿದ್ದಾರೆ.
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…