ಕರ್ನಾಟಕ ಸರ್ಕಾರ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಆಯೋಜಿಸಲಾಗಿದೆ.
ಮಾಂಗಲ್ಯ ಧಾರಣೆ ಕಾರ್ಯಕ್ರಮದಲ್ಲಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಒಟ್ಟು 13 ಜೋಡಿಗಳು ನೋಂದಣಿ ಮಾಡಿಕೊಂಡಿದ್ದಾರೆ.
‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ 5 ಸಾವಿರ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗುವುದು.
ಅದೇರೀತಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗುವುದು ಎಂದು ದೇವಾಲಯದ ಕಾರ್ಯನಿರ್ವಾಹಕ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 9590300410, 9241297450, 9980907997ನ್ನು ಸಂಪರ್ಕಿಸಬಹುದಾಗಿದೆ.