ಇಂಡಿಯಾದ ಮೈಕಲ್ ಜಾಕ್ಸನ್ ಎಂದೇ ಖ್ಯಾತಿ ಪಡೆದಿರುವ ಖ್ಯಾತ ಕೊರಿಯೋಗ್ರಾಫರ್, ನಟ, ನಿರ್ದೇಶಕ ಪ್ರಭುದೇವ ಅವರು ಇಂದು ತಾಲೂಕಿನ ಪ್ರಸಿದ್ಧ ದೇವಾಲಯವಾದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
50ನೇ ವಯಸ್ಸಿನಲ್ಲಿ ಹೆಣ್ಣು ಮಗುವಿನ ತಂದೆಯಾದ ಪ್ರಭುದೇವ. ಈ ಹಿನ್ನೆಲೆ ಇಂದು ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ಒದಗಿಬಂದಿದೆ.
ದೇವರ ದರ್ಶನ ಪಡೆದ ನಂತರ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದರಿಂದ ಸಾವಧಾನವಾಗಿ ಸೆಲ್ಫಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಈ ವೇಳೆ ದೇವಾಲಯದ ಆಡಳಿತಾಧಿಕಾರಿ, ಸೇರಿದಂತೆ ದೇವಾಲಯದ ಸಿಬ್ಬಂದಿ ಇದ್ದರು.