ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪಗೆ ಲಭಿಸಿದ ಗೌರವ ಡಾಕ್ಟರೇಟ್ ಪ್ರಶಸ್ತಿ (ಗೌರವ ಪ್ರಶಸ್ತಿ)

ಚೆನ್ನೈನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ (GHPU)ಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ)ಯನ್ನು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಿ.ಎನ್ ರಂಗಪ್ಪನವರು ಪಡೆದಿದ್ದಾರೆ.

ಜಿ.ಎನ್ ರಂಗಪ್ಪನವರು ಮಾಡಿದಂತಹ ಸಮಾಜ ಸೇವೆ, ರಾಜಕೀಯ ಕ್ಷೇತ್ರದಲ್ಲಿ ಗಣನೀಯ ಸಾಧನೆ, ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಸೇರಿದಂತೆ ಇತರೆ ದೇವಸ್ಥಾನಗಳ ಅಭಿವೃದ್ಧಿ ಕಾರ್ಯ ಸಾಧನೆ ಹಾಗೂ ಇನ್ನಿತರೆ ಸಾಧನೆಗಳನ್ನು ಗುರುತಿಸಿ ಈ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಪ್ರಶಸ್ತಿ ಪುರಸ್ಕೃತ ಜಿ.ಎನ್ ರಂಗಪ್ಪ ಮಾತನಾಡಿ, ನಾನು ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ) ಪಡೆದಿರುವುದಕ್ಕೆ ಸಂತಸ ತಂದಿದೆ. ನಾನು ಮಾಡಿದಂತಹ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಇದಕ್ಕೆ ಸಹಕರಿಸಿದ ನನ್ನ ಹಿತೈಶಿಗಳು ಸೇರಿದಂತೆ ಎಲ್ಲರಿಗೂ ವಂದನೆಗಳನ್ನು ತಿಳಿಸುತ್ತೇನೆ. ನನ್ನ ಈ ಸಮಾಜ ಸೇವೆಯನ್ನು ಮುಂದುವರಿಸುತ್ತೇನೆ ಎಂದರು.

ನಂತರ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ವಿ.ಮಹೇಶ್ ಕುಮಾರ್ ಮಾತನಾಡಿ, ಜಿ.ಎನ್ ರಂಗಪ್ಪನವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುವ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಭಾಗದಲ್ಲಿ ರಾಜಕೀಯವಾಗಿ ಸಕ್ರಿಯರಾಗಿದ್ದಾರೆ. ಇವರು ರಾಜಕೀಯ, ಸಮಾಜ ಸೇವೆ, ದೇವಾಲಯಗಳ ಅಭಿವೃದ್ಧಿ ಸೇರಿದಂತೆ ಇನ್ನಿತರೆ ಕೈಂಕರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಚೆನ್ನೈನ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ (GHPU)ಯು ಗೌರವ ಡಾಕ್ಟರೇಟ್ ಪ್ರಶಸ್ತಿ(ಗೌರವ ಪ್ರಶಸ್ತಿ)ಯನ್ನು ನೀಡಿ ಗೌರವಿಸಿರುವುದು‌ ಬಹಳ ಸಂತಸ ತಂದಿದೆ. ಇವರು ಮುಂದೆಯು ಸಮಾಜ ಸೇವೆಯನ್ನು ಮುಂದುವರಿಸಬೇಕೆಂದು‌ ಕೋರುತ್ತೇನೆ‌ ಎಂದರು.

ಈ ಪ್ರಶಸ್ತಿಯನ್ನು ಪಡೆಯಲು ಜಿ.ಎನ್ ರಂಗಪ್ಪನವರು ಅರ್ಹರಿದ್ದಾರೆ. ಸಮಾಜ ಸೇವೆಯ ಜೊತೆಗೆ‌ ಪ್ರಾಣಿಪಕ್ಷಿಗಳ ಸೇವೆಯನ್ನು ಮಾಡುತ್ತಿದ್ದಾರೆ. ಊರುಗಳಲ್ಲಿ ಸ್ವಚ್ಛತೆ ಕಾಪಾಡುವುದು, ಜನರ ಆರೋಗ್ಯದ ಕಾಳಜಿ ವಹಿಸುವುದು, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಆದ್ದರಿಂದ ಇವರ ಈ ಸಾಧನೆಗಳಿಗಾಗಿ ಇನ್ನಷ್ಟು ಪ್ರಸ್ತಿಗಳು‌ ಲಭಿಸಲಿ ಎಂದು ಕೋರಿದರು.

ಈ ವೇಳೆ ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಭೂ ಮಂಜೂರಾತಿ‌ ಸಮಿತಿ ಸದಸ್ಯ ಗಂಗಸಂದ್ರ ಜಿ.ಕೆ.ಶ್ರೀಧರ್, ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ, ತಾಲೂಕಿನ ಕೃಷಿಕ ಸಮಾಜದ ಅಧ್ಯಕ್ಷ ಮುರುಳಿಧರ್.ಆರ್ ಸೇರಿದಂತೆ ಇತರರು ಅಭಿನಂದಿಸಿದ್ದಾರೆ.

Ramesh Babu

Journalist

Recent Posts

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

48 minutes ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

12 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

16 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

19 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

22 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago