ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಒಳಾಂಗಣ ದುರಸ್ತಿ ಕಾರ್ಯ ಬರದಿಂದ ಸಾಗುತ್ತಿದೆ.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ರಚನೆ ಆದ ನಂತರ ಮೊದಲ ಬಾರಿಗೆ ದೇವಾಲಯದ ಒಳಾಂಗಣ ಭಾಗದಲ್ಲಿ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ದೇವಾಲಯ ಹಾಗೂ ಭಕ್ತಾಧಿಗಳ ಸಹಕಾರದಿಂದ ದುರಸ್ತಿ ಕಾರ್ಯ ನಡೆಯುತ್ತಿದೆ.‌ ಮುಂಬರುವ ಸುಬ್ರಹ್ಮಣ್ಯ ಬ್ರಹ್ಮರಥೋತ್ಸವ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜಿ.ಎನ್ ರಂಗಪ್ಪ ತಿಳಿಸಿದರು.

ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಡುತ್ತದೆ. ಭಕ್ತಾಧಿಗಳ ಅನುಕೂಲಕ್ಕೆ ತಕ್ಕಂತೆ ದೇವಾಲಯವನ್ನು ಕಾಲಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಲಾಗುವುದು.

ಘಾಟಿ ದೇವಾಲಯವನ್ನು ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮಾದರಿ ಅಭಿವೃದ್ಧಿಪಡಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಹಾಗೂ ಆಹಾರ ಸಚಿವ ಕೆ.ಎಚ್ ಮುನಿಯಪ್ಪನವರ ಆಸೆ. ಅದರಂತೆ ದೇವಾಲಯಕ್ಕೆ ಸಂಬಂಧಪಟ್ಟ ಒಂದೊಂದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದರು.

ಕ್ಯೂ ನಿಲ್ಲುವ ಸಂಕಿರಣ, ದಾಸೋಹ ಭವನ ನಿರ್ಮಿಸಲು ಪ್ಲ್ಯಾನ್ ಮಾಡಲಾಗಿದೆ. ಅದನ್ನು ಆದಷ್ಟು ಬೇಗ ಕಾಮಗಾರಿ ನಡೆಸಲಾಗುವುದು ಎಂದು ಹೇಳಿದರು.

ಘಾಟಿ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ದೇವಾಲಯದ ಸುತ್ತಾಮುತ್ತ ಪ್ಲಾಸ್ಟಿಕ್ ನಿಷೇಧ ಕುರಿತು ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಭಕ್ತಾಧಿಗಳು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!