ಶ್ರೀ ಘಾಟಿ‌ ಸುಬ್ರಹ್ಮಣ್ಯ ದೇವಾಲಯದಲ್ಲಿ ಶಾಸ್ತ್ರೋಕ್ತವಾಗಿ ನಡೆದ ‘ಮಾಂಗಲ್ಯ‌ ಭಾಗ್ಯ’: ದಾಂಪತ್ಯ ಜೀವನಕ್ಕೆ ಕಾಲಿಟ್ಟ13 ಜೋಡಿಗಳು

ಕರ್ನಾಟಕ ಸರ್ಕಾರ ಧಾರ್ಮಿಕ‌ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ತಾಲೂಕಿನ‌ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ‌ ದೇವಸ್ಥಾನದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ‘ಮಾಂಗಲ್ಯ ಭಾಗ್ಯ’ ಎಂಬ ಯೋಜನೆಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನ ಇಂದು(ಜ. 31) ಬೆಳಗ್ಗೆ 11:20 ರಿಂದ 12:20ರವರೆಗೆ ಸಲ್ಲುವ ಅಭಿಜಿನ್ ಲಗ್ನದಲ್ಲಿ ಹಿಂದು ಸಂಪ್ರದಾಯದಂತೆ, ಪೌರೋಹಿತರ ವೇದ ಮಂತ್ರ ಘೋಷ ದೊಂದಿಗೆ ವಿವಾಹವಾಗಿ ಹೊಸ ಬಾಳಿಗೆ ಒಟ್ಟು 13 ಜೋಡಿಗಳು ಕಾಲಿರಿಸಿದರು.

‘ಮಾಂಗಲ್ಯ ಭಾಗ್ಯ’ ಶುಭ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ವರನಿಗೆ‌ 5 ಸಾವಿರ‌ ಹಾಗೂ ವಧುವಿಗೆ 10 ಸಾವಿರ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು‌ ಹೀಗೆ ಒಟ್ಟು 55 ಸಾವಿರ ರೂ. ಗಳನ್ನ ದೇವಾಲಯದ ವತಿಯಿಂದ ಭರಿಸಲಾಗಿತ್ತು.

ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಸಹ ದೇವಾಲಯ ವತಿಯಿಂದ ಮಾಡಲಾಗಿತ್ತು.

ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶೀಲ್ದಾರ್ ಜೆ.ಜೆ.ಹೇಮಾವತಿ, ನಂಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

10 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

12 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

14 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

14 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

16 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

21 hours ago