ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಸೋಮವಾರ) ಹುಂಡಿ ಎಣಿಕೆ ಮಾಡಲಾಯಿತು.
ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಸೋಮವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.69ಲಕ್ಷ ಹಣ ಸಂಗ್ರಹವಾಗಿದೆ.
ಇದರೊಂದಿಗೆ 79200 ರೂ ಮೌಲ್ಯದ 01 ಕೆಜಿ 500 ಗ್ರಾಂ ಬೆಳ್ಳಿ, 3720 ರೂ ಮೌಲ್ಯದ 300 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ. ಆರ್. ಸುಬ್ರಹ್ಮಣ್ಯ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಮತದಾನ ಡಿ.21ರಂದು ನಡೆದಿತ್ತು. ಇಂದು (ಡಿ.24)ರಂದು ಮತ ಎಣಿಕೆ ನಡೆದಿದ್ದು, ಬಿಜೆಪಿ 14, ಕಾಂಗ್ರೆಸ್…
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…