ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಹುಂಡಿ‌ ಎಣಿಕೆ: ರೂ.64,51,009 ಹಣ ಸಂಗ್ರಹ

ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಗುರುವಾರ) ಹುಂಡಿ ಎಣಿಕೆ ಕಾರ್ಯ ಮಾಡಲಾಯಿತು.

ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲದಲ್ಲಿ ಗುರುವಾರ ಹುಂಡಿ ಕಾಣಿಕೆ ಎಣಿಕೆ ಮಾಡಲಾಗಿದ್ದು, ರೂ.64,51,009 ಹಣ ಸಂಗ್ರಹವಾಗಿದೆ.

ಇದರೊಂದಿಗೆ 44100 ರೂ. ಮೌಲ್ಯದ 7 ಗ್ರಾಂ ಚಿನ್ನ, 77500 ರೂ. ಮೌಲ್ಯದ 1.550 ತೂಕದ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.

ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್.ರಂಗಪ್ಪ, ಕೆ.ಎಸ್.ರವಿ, ಲಕ್ಷ್ಮಣ ನಾಯಕ್, ಆರ್‌. ವಿ .ಮಹೇಶ್ ಕುಮಾರ್, ಹೇಮಲತಾ ರಮೇಶ್, ಪ್ರಧಾನ ಅರ್ಚಕ ಆರ್. ಸುಬ್ರಹ್ಮಣ್ಯ‌, ದೇವಾಲಯದ ಸಿಬ್ಬಂದಿ, ಪೊಲೀಸ್ ಇಲಾಖೆ, ಕೆನರಾ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

3 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

4 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

5 hours ago

ಎಸ್ ಐ ಆರ್…..

ನಾವು ಅಕ್ರಮ ವಲಸಿಗರಲ್ಲ, ವಂಚಕರಲ್ಲ, ಈ ಮಣ್ಣಿನ ಮೂಲ ನಿವಾಸಿಗಳು. ದಯವಿಟ್ಟು ನಮ್ಮ ಅಸ್ತಿತ್ವವನ್ನು, ಸ್ವಾಭಿಮಾನವನ್ನು ಪ್ರಶ್ನಿಸಬೇಡಿ. ನಾವು ಭಾರತೀಯರು......…

11 hours ago

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

23 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

1 day ago