ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಇಂದು(ಶನಿವಾರ) ಹುಂಡಿ ಎಣಿಕೆ ಮಾಡಲಾಯಿತು. ಒಟ್ಟು 59,28,876 ರೂ. ಹಣ ಸಂಗ್ರಹವಾಗಿದೆ.
ಹಣದೊಂದಿಗೆ 63,000 ರೂ. ಮೌಲ್ಯದ 1 ಕೆಜಿ 400 ಗ್ರಾಂ ತೂಕದ ಬೆಳ್ಳಿ, 1 ಲಕ್ಷ 57 ಸಾವಿರ ರೂ. ಮೌಲ್ಯದ 19 ಗ್ರಾಂ 500 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು.
ಹುಂಡಿ ಎಣಿಕೆ ಕಾರ್ಯದಲ್ಲಿ ದೇವಾಲಯದ ಕಾರ್ಯದರ್ಶಿ ಎಂ ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಜಿ .ಜೆ. ಹೇಮಾವತಿ, ದೇವಾಲಯದ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ ಕೆ. ಎಸ್ .ರವಿ ,ಲಕ್ಷ್ಮ ನಾಯಕ್, ಮಹೇಶ್ ಕುಮಾರ್, ಹೇಮಲತಾ ರಮೇಶ್, ಹಾಗೂ ದೇವಾಲಯದ ಪ್ರಧಾನ ಅರ್ಚಕ ಶ್ರೀನಿಧಿ, ದೇವಾಲಯದ ಸಿಬ್ಬಂದಿ, ಇಂಡಿಯನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ…
ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ…
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ…
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ…
ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ…