ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ ಬಹಳ ವೈಭವದೊಂದಿಗೆ ನೆರವೇರಿತು.

ಮುಜರಾಯಿ ಇಲಾಖಾ ಸಚಿವ ರಾಮಲಿಂಗ ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ರಥೋತ್ಸವಕ್ಕೆ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು. ರಥೋತ್ಸವಕ್ಕೆ ರಾಜ್ಯದ ನಾನಾ ಭಾಗಗಳಿಂದ ಭಕ್ತಗಣ ಸಾವಿರಾರು ಸಂಖ್ಯೆಯಲ್ಲಿ ಹರಿದು ಬಂದು, ರಥವನ್ನ ಎಳೆದು, ರಥಕ್ಕೆ ಬಾಳೆಹಣ್ಣು, ದವನ ಎಸೆದು ತಮ್ಮ ಭಕ್ತಿ ಇಚ್ಚಾನುಸಾರ ಸಮರ್ಪಿಸಿ ಪುನೀತರಾದರು.

ಷಷ್ಠಿಯ ದಿನದಂದು ಮುಂಜಾನೆ 3ರಿಂದ ದೇವಸ್ಥಾನದಲ್ಲಿ ಪೂಜಾ ಕಾರ್ಯಗಳು ಆರಂಭವಾಗಲಿವೆ. ಅಭಿಷೇಕ ಕಾರ್ಯಗಳು ಪ್ರಾರಂಭಗೊಂಡು, 5:30ಕ್ಕೆ ಮಹಾಮಂಗಳಾರತಿ ನೆರವೇರಿತು. ಗರ್ಭಗುಡಿಯಲ್ಲಿನ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಲಕ್ಷ್ಮೀನರಸಿಂಹಸ್ವಾಮಿ ಮೂರ್ತಿಗಳಿಗೆ ಪ್ರಾತಃ ಕಾಲದಲ್ಲಿ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಶ್ರೀಗಂದಾಭಿಷೇಕ, ಭಸ್ಮದಭಿಷೇಕದೊಂದಿಗೆ ಹೂವಿನ ಅಲಂಕಾರ ನೆರವೇರಿಸಲಾಯಿತು. ರಾತ್ರಿ 8:30ರವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ದೊರೆಯಲಿದೆ.

ಭಕ್ತರಿಗೆ ಅನ್ನ ದಾಸೋಹ, ಮಜ್ಜಿಗೆ, ಪಾನಕದ ವ್ಯವಸ್ಥೆ ಮಾಡಲಾಗಿತ್ತು. ಜಾತ್ರೆಗೆ ಆಗಮಿಸುವ ಭಕ್ತರಿಗೆ ವಿಶೇಷ ಬಸ್‍ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

ಬ್ರಹ್ಮರಥೋತ್ಸವಕ್ಕೆ ಬರುವ ಸಹಸ್ರಾರು ಭಕ್ತಾಧಿಗಳಿಗೆ ಮೊಬೈಲ್‌ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಶುಧ್ಧ ಕುಡಿಯುವ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ‌ ಮಾಡಲಾಗಿದೆ. ಚಿನ್ನಾಭರಣ ಕಳವು ಸೇರಿದಂತೆ ಯಾವು‌ದೇ‌ ಅಪರಾಧ ಕೃತ್ಯಗಳು ನಡೆಯದಂತೆ ತಡೆಯಲು ದ್ರೋಣ್‌ ಕ್ಯಾಮೆರಾ ಮತ್ತು ದೇವಾಲಯದ ಸುತ್ತಾಮುತ್ತಾ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಪಾರ್ಕಿಂಗ್ ವ್ಯವಸ್ಥೆ

ಸಂಚಾರ ದಟ್ಟಣೆ ನಿಯಂತ್ರಿಸಲು ದೇವಾಲಯದಿಂದ 1 ಕಿ.ಮೀ ಅಂತರದಲ್ಲೇ 14 ಕಡೆ ಬೈಕ್, ಕಾರು, ಬಸ್‌ ಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲಾಗಿತ್ತು.

ಪೊಲೀಸ್ ಭದ್ರತೆ

ಘಾಟಿ ಬ್ರಹ್ಮರಥೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು, ಅಗತ್ಯವಿರುವ ಕಡೆ ಬ್ಯಾರಿಕೇಡ್ ವ್ಯವಸ್ಥೆ ಸಹ ವ್ಯವಸ್ಥೆ ಮಾಡಲಾಗಿತ್ತು.

ಸಾರಿಗೆ ವ್ಯವಸ್ಥೆ

ಜಾತ್ರಾ ಮಹೋತ್ಸವದ ಪ್ರಯುಕ್ತ ಕೆ.ಎಸ್.ಆರ್.ಟಿ.ಸಿ ವತಿಯಿಂದ ಘಾಟಿಯಿಂದ ದೊಡ್ಡಬಳ್ಳಾಪುರ, ಬೆಂಗಳೂರು, ಚಿಕ್ಕಬಳ್ಳಾಪುರ, ಗೌರಿಬಿದನೂರು, ಕೋಲಾರ ಹಾಗೂ ಮುಂತಾದ ಸ್ಥಳಗಳಿಗೆ 84 ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿತ್ತು. ಅದೇರೀತಿ ‘ಶಕ್ತಿ ಯೋಜನೆ’ ಅಡಿಯಲ್ಲಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಅವಕಾಶವನ್ನ ಸಹ ಕಲ್ಪಿಸಲಾಗಿತ್ತು.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

22 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 days ago