ಶ್ರೀ ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಸಂಪನ್ನ

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರ‌‌ಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಹಿನ್ನೆಲೆ ದೇವಾಲಯವನ್ನು ವಿವಿಧ ಪುಷ್ಪಗಳು, ತಳಿರು ತೋರಣಗಳಿಂದ ಅಲಂಕರಿಸಿ ವಿಶೇಷ ಪೂಜೆ, ಪುನಸ್ಕಾರ ನಡೆಸಲಾಯಿತು.

ಇಂದು ಮುಂಜಾನೆ 5:00 ಗಂಟೆಗೆ ಅಭಿಷೇಕ ಮತ್ತು ಮಹಾ ಮಂಗಳಾರತಿ ಹಾಗೂ ವಿಶೇಷ ಅಲಂಕಾರ ಮಾಡಲಾಯಿತು. ದೇವರ ದರ್ಶನಕ್ಕೆಂದು ಸಾವಿರಾರು ಭಕ್ತರು ಆಗಮಿಸಿದ್ದರು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ದೇವಸ್ಥಾನಕ್ಕೆ ಬಂದ ಭಕ್ತಾದಿಗಳು ನಾಗರಕಲ್ಲಿಗೆ ಹಾಗೂ ಹುತ್ತಕ್ಕೆ ಹಾಲು ಮೊಸರು ತುಪ್ಪವನ್ನು ಹಾಕಿ ತಮ್ಮ ಹರಕೆಯನ್ನು ತೀರಿಸಿಕೊಂಡರು.

ಚಂಪಾ ಷಷ್ಠಿಯು ಈಶ್ವರ ಮತ್ತು ಸುಬ್ರಹ್ಮಣ್ಯನನ್ನು ಪೂಜಿಸುವ ಉತ್ಸವವಾಗಿರುತ್ತದೆ. ಈ ಉತ್ಸವ ಮಾರ್ಗಶಿರ ಮಾಸದ ಶುಕ್ಲಪಕ್ಷದಂದು ನಡೆಯುತ್ತದೆ. ಈ ಹಬ್ಬದ ಆಚರಣೆಯ ಮುಖ್ಯ ಉದ್ದೇಶ ಸಂತೋಷ, ನೆಮ್ಮದಿ , ಸುಖ, ಶಾಂತಿ ಆರೋಗ್ಯ, ಧನ್ಯಾತ್ಮಕ ಭಾವನೆಗಳು ಮನದಲ್ಲಿ ಉಂಟುಮಾಡಲಿವೆ ಎಂಬ ನಂಬಿಕೆ ಇದೆ.

ದೇವಸ್ಥಾನಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.

Ramesh Babu

Journalist

Recent Posts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 hour ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

2 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

16 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

21 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

22 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 day ago