ನಗರದ ತೇರಿನ ಬೀದಿಯಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಎರಡು ಬೆಳ್ಳಿ ಕಿರೀಟ, ಹಾಗೂ ಒಂದು ಚಿನ್ನದ ತಾಳಿಯನ್ನು ಕದ್ದೊಯ್ದ ಕಳ್ಳರು.
ಸೋಮವಾರ ರಾತ್ರಿ ಎರಡು ಗಂಟೆ ಸುಮಾರಿಗೆ ಘಟನೆ ನಡೆದಿದೆ ಎನ್ನಲಾಗಿದ್ದು, ಇದಕ್ಕೂ ಮುನ್ನ ನಗರದ ಇತಿಹಾಸ ಪ್ರಸಿದ್ಧ ಪ್ರಸನ್ನ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಬೀಗ ಮುರಿದು ಕಳ್ಳತನ ಪ್ರಯತ್ನ ಮಾಡಿದ್ದಾರೆ. ಆದರೆ ಅದು ವಿಫಲವಾಗಿದೆ.
ನಂತರ ಪಕ್ಕದಲ್ಲಿರುವ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು, ಎರಡು ಬೆಳ್ಳಿ ಕಿರೀಟ ಮತ್ತು ಸುಮಾರು 16 ಸಾವಿರ ಮೌಲ್ಯದ ಚಿನ್ನದ ತಾಳಿಯನ್ನು ಕದ್ದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…