ಶ್ರೀ ದೇವರಾಜ ಅರಸ್ ಕಾಲೇಜಿನಲ್ಲಿ ಸಂಭ್ರಮ ಕಾರ್ಯಕ್ರಮ

ಸ್ನಾತಕ, ಸ್ನಾತಕೋತ್ತರ ಪದವಿಗಳು ಮುಖ್ಯ ಅಲ್ಲ ಜೀವನದಲ್ಲಿ ಸಂಸ್ಕಾರ ಮುಖ್ಯ ಪ್ರತಿಯೊಬ್ಬ ವಿದ್ಯಾರ್ಥಿಯೂ ತಾನು ಏನಾಗಬೇಕೆಂದು ಯೋಚಿಸಬೇಕು. ಅಂತೆಯೇ ಹೆತ್ತವರೂ ತಮ್ಮ ಮಕ್ಕಳು ಹೇಗೆ ಬೆಳೆಯಬೇಕು ಎಂಬುದರ ಬಗ್ಗೆ ಆಲೋಚನೆ ಮಾಡಬೇಕು. ಹಾಗಾದಾಗ ಉತ್ತಮ ಮಾರ್ಗವನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ ಎಂದು ಸರ್ಕಾರಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಜಿ.ಶ್ರೀನಿವಾಸ ಹೇಳಿದರು.

ಶ್ರೀ ದೇವರಾಜ ಅರಸ್ ವ್ಯವಹಾರ ನಿರ್ವಹಣಾ ಮಹಾ ವಿದ್ಯಾಲಯದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಮೊಬೈಲ್ ಬಳಸುವುದನ್ನು ಕಡಿಮೆ ಮಾಡಿ ಪುಸ್ತಕ ಓದುವುದನ್ನು ರೂಡಿಸಿಕೊಳ್ಳಬೇಕು ಎಂದರು.

ಹೆಚ್ಚು ಹೆಚ್ಚು ಪಠ್ಯೇತರ ಸಂಗತಿಗಳನ್ನೂ ತಿಳಿದುಕೊಳ್ಳುತ್ತಾ ವ್ಯಕ್ತಿತ್ವವನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದರು.

ಶ್ರೀ ದೇವರಾಜ ಅರಸು ವಿದ್ಯಾ ಸಂಸ್ಥೆಯ ಉಪಾಧ್ಯಕ್ಷರಾದ ಜೆ.ರಾಜೇಂದ್ರ ಮಾತನಾಡಿ ವಿದ್ಯಾರ್ಥಿಗಳು ಕಲಿಯುವ ಸಂದರ್ಭದಲ್ಲಿ ತಮ್ಮ ಗಮನ ಎಲ್ಲಾ ಕಡೆ ಇರಬೇಕು, ಕೇವಲ ಒಂದಕ್ಕೆ ಸೀಮಿತಗೊಳ್ಳಬಾರದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಉತ್ಕೃಷ್ಟ ದೇಶಪ್ರೇಮಿಯಾಗಬೇಕು ಮೊಬೈಲ್ ಮತ್ತು ವಾಹನಗಳ ಆಕರ್ಷಣೆಯಿಂದ ಬದುಕುನ್ನು ಹಾಳು ಮಾಡಿಕೊಳ್ಳಬಾರದು ಎಂದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ, ಕಾಲೇಜಿನಲ್ಲಿ ಕಳೆದ ಮೂರು ವರ್ಷಗಳಿಂದ ಎಂ.ಕಾಂ ಆರಂಭಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಕಾಲೇಜು ವಿಸ್ತೃತಗೊಳ್ಳುತ್ತಿದೆ. ವಿದ್ಯಾರ್ಥಿಗಳನ್ನು ಪರಿಪೂರ್ಣತೆಯೆಡೆಗೆ ಕರೆದೊಯ್ಯುವ ಎಲ್ಲಾ ಪ್ರಯತ್ನಗಳೂ ಜಾರಿಯಲ್ಲಿವೆ, ವಿದ್ಯಾರ್ಥಿಗಳು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು, ಯುವ ಮನಸ್ಸುಗಳು ಅರ್ಥ ಮಾಡಿಕೊಂಡು ಪಾಠ ಪ್ರವಚನಗಳ ಕಡೆ ಗಮನ ಹರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರಾದ ಕೆ. ದಕ್ಷಿಣಾಮೂರ್ತಿ, ಐ,ಕ್ಯೂ,ಎ,ಸಿ ಯ ಸಂಯೋಜಕರಾದ ಆರ್. ಉಮೇಶ್, ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಸಿ.ಪಿ.ಪ್ರಕಾಶ್ ಎನ್.ಎಸ್.ಎಸ್ ಅಧಿಕಾರಿಗಳಾದ ಲಕ್ಷ್ಮೀಶ, ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಪಿ.ಚೈತ್ರ ಸೇರಿದಂತೆ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *