
ಅಕ್ಟೊಬರ್ 07 ರಂದು ರಾಜ್ಯ ಸರ್ಕಾರದ ವತಿಯಿಂದ ತಾಲ್ಲೂಕು, ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ರಾಜ್ಯಮಟ್ಟದಲ್ಲಿ ಶೀ ಮಹರ್ಷಿ ವಾಲ್ಮೀಕಿಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿರವರ ಸ್ಮರಣಾರ್ಥ ಪ್ರಶಸ್ತಿ ನೀಡಿಗೌರವಿಸಲು ಉದ್ದೇಶಿಸಲಾಗಿದೆ.
ರಾಜ್ಯಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 17 ರೊಳಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೇರವಾಗಿ ಸಲ್ಲಿಸತಕ್ಕದ್ದು, ಹಾಗೂ ನಿಗದಿತ ದಿನಾಂಕದ ನಂತರ ಬಂದಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ:205, ಜಿಲ್ಲಾಡಳಿತ ಭವನ, ಬೀರಸಂದ್ರಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರಜಿಲ್ಲೆ. ದೂರವಾಣಿ: 080-29787448 ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.