ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು.
ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.
24 ಸಾವಿರ ಕವನಗಳನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಗುಣಮಟ್ಟದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸಮಾಜದಲ್ಲಿ ಏಳಿಗೆ ಸಾಧ್ಯ. ಹಿಂದುಳಿದವರ ಅಭಿವೃದ್ಧಿಗಾಗಿ ಸಮುದಾಯದ ಶಾಲೆಗಳನ್ನು ನಿರ್ಮಿಸಿರುವುದು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಗಳು ಶಿಕ್ಷಣ ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕು ಎಂಬ ಉದ್ದೇಶದಿಂದ, ಪರಿಶಿಷ್ಟ ಪಂಗಡದ ಹೆಣ್ಣುಮಕ್ಕಳಿಗೆ 6 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿಯಾಗಿದೆ. ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಸಿ.ನಾರಾಯಣ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ರಾಜಣ್ಣ, ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇ.ಒ ಶ್ರೀನಾಥ್ ಗೌಡ, ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.
ತಲಾ ಆದಾಯದಲ್ಲಿ ನಾವು ದೇಶದಲ್ಲೇ ನಂಬರ್ ಒನ್ ಆಗಿದ್ದೇವೆ. ಆದ್ದರಿಂದ ದೇಶಕ್ಕೆ ಕಾಂಗ್ರೆಸ್ ಬೇಕು. ತೆರಿಗೆ ಸಂಗ್ರಹದಲ್ಲಿ ರಾಜ್ಯ ಎರಡನೇ…
ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…
ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…
ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…
ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…