ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ರವರು ಹೇಳಿದರು.

ದೇವನಹಳ್ಳಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯತಿ ವತಿಯಿಂದ ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮನ್ನು ಉದ್ಘಾಟಿಸಿ ಅವರು ಮಾತನಾಡಿದರು.

24 ಸಾವಿರ ಕವನಗಳನ್ನು ರಚಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರಿಗೆ ಸಲ್ಲುತ್ತದೆ. ಗುಣಮಟ್ಟದ ವಿದ್ಯಾಭ್ಯಾಸ ಮಾಡಿದರೆ ಮಾತ್ರ ಸಮಾಜದಲ್ಲಿ ಏಳಿಗೆ ಸಾಧ್ಯ. ಹಿಂದುಳಿದವರ ಅಭಿವೃದ್ಧಿಗಾಗಿ ಸಮುದಾಯದ ಶಾಲೆಗಳನ್ನು ನಿರ್ಮಿಸಿರುವುದು ಆರ್ಥಿಕವಾಗಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮಾಜಗಳು ಶಿಕ್ಷಣ‌ ಪಡೆದು ಸಮಾಜದಲ್ಲಿ ಮುಂಚೂಣಿಯಲ್ಲಿರಬೇಕು ಎಂಬ ಉದ್ದೇಶದಿಂದ, ಪರಿಶಿಷ್ಟ ಪಂಗಡದ ಹೆಣ್ಣುಮಕ್ಕಳಿಗೆ 6 ಕೋಟಿ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣಕ್ಕೆ ಮಂಜೂರಾತಿಯಾಗಿದೆ. ಹೆಣ್ಣು ಮಕ್ಕಳು ಸಹ ಉತ್ತಮ ವಿದ್ಯಾಭ್ಯಾಸ ಪಡೆದು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂಬ ಆಶಯ ವ್ಯಕ್ತಪಡಿಸಿ, ಸಮುದಾಯದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಯಲ್ಲಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಮಾಜಿ ಸಂಸದರಾದ ಸಿ.ನಾರಾಯಣ ಸ್ವಾಮಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷರು ರಾಜಣ್ಣ, ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ ರಮೇಶ್, ದೇವನಹಳ್ಳಿ ತಹಸೀಲ್ದಾರ್ ಶಿವರಾಜ್, ಇ.ಒ ಶ್ರೀನಾಥ್ ಗೌಡ, ಸಮುದಾಯದ ಅಧ್ಯಕ್ಷರಾದ ಜಿ.ನಾಗೇಶ್ ಬಾಬು ಹಾಗೂ ಸಮುದಾಯದ ವಿವಿಧ ಮುಖಂಡರು, ಸಾರ್ವಜನಿಕರು ಭಾಗವಹಿಸಿದ್ದರು.

Ramesh Babu

Journalist

Recent Posts

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

9 hours ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

22 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

23 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

1 day ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

1 day ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

1 day ago