ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವತಿಯಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಪರಿಶಿಷ್ಟ ವರ್ಗದವರ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ನೀಡುವ ಪ್ರಶಸ್ತಿಗೆ ಆಸಕ್ತ ಅಭ್ಯರ್ಥಿಗಳು ರಾಜ್ಯ ಮಟ್ಟದಲ್ಲಿ ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಅರ್ಹ ವ್ಯಕ್ತಿಗಳು ನಿಗದಿತ ಸಮಯದಲ್ಲಿ ಅರ್ಜಿಯನ್ನು ಸೆಪ್ಟೆಂಬರ್ 07 ರೊಳಗೆ ಕಚೇರಿ ಸಮಯದಲ್ಲಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ 205, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂಖ್ಯೆ:080-29787448 ಗೆ ಸಂಪರ್ಕಿಸಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!