ಸಂಕಷ್ಟದಿಂದ ಸುಸ್ಥಿತಿಗೆ – ವೈದ್ಯಕೀಯದ ಅದ್ಭುತ ಸಾಧನೆ

ಬೆಂಗಳೂರು, ವೈಟ್‌ಫೀಲ್ಡ್ : ಒಂದೂವರೆ ವರ್ಷಕ್ಕೂ ಹೆಚ್ಚು ಕಾಲ ಗಂಭೀರ ಸಮಸ್ಯೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ 26 ವರ್ಷದ ಯುವಕನಿಗೆ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ ನೀಡಲಾಗಿದ್ದು, ಇದೀಗ ಅವರು ಹೊಸ ಜೀವನವನ್ನು ಆರಂಭಿಸಿದ್ದಾರೆ.

ರೋಗಿಗೆ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುವ ಸಮಸ್ಯೆ ಇತ್ತು. ಕಾಲಕ್ರಮೇಣ ಸಮಸ್ಯೆ ತೀವ್ರಗೊಂಡು, ಕಳೆದ ಮೂರು ತಿಂಗಳಿನಿಂದ ಕರುಳು ಸಂಪೂರ್ಣವಾಗಿ ಹೊರಗಡೆಯೇ ಉಳಿದು ಕೊಳೆತು ಹೋಗಿತ್ತು. ಇದರಿಂದ ತೀವ್ರ ನೋವು, ಅಸಹನೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸುವುದೇ ಕಷ್ಟಕರವಾಗಿತ್ತು. ಜೊತೆಗೆ ಎರಡೂ ಕಾಲುಗಳಲ್ಲಿ ನೋವು ಹಾಗೂ ಕೈಕಾಲುಗಳಲ್ಲಿ ನಿರಂತರ ಜಗ್ಗುವ ಅನುಭವವೂ ಕಾಣಿಸಿಕೊಂಡಿತ್ತು.

ಹಲವೆಡೆ ಚಿಕಿತ್ಸೆ ಪಡೆದರೂ ಯಾವುದೇ ಪ್ರಯೋಜನವಾಗದೆ, ರೋಗಿಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಇತ್ತು. ದೈಹಿಕ ಮಾತ್ರವಲ್ಲದೆ ಮಾನಸಿಕವಾಗಿಯೂ ಇದು ದೊಡ್ಡ ಸವಾಲಾಗಿ ಪರಿಣಮಿಸಿತ್ತು.

ಕೊನೆಗೆ ಅವರು ಪಶ್ಚಿಮ ಬಂಗಾಳದಿಂದ ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ಭೇಟಿ ನೀಡಿ, ಕನ್ಸಲ್ಟೆಂಟ್ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮಣಿಯನ್ ಅವರನ್ನು ಸಂಪರ್ಕಿಸಿದರು. ಸಂಪೂರ್ಣ ಪರೀಕ್ಷೆಗಳು ಹಾಗೂ ಅಗತ್ಯ ತನಿಖೆಗಳ ನಂತರ, “ಇನ್‌ಕಾರ್ಸರೆಟೆಡ್ ರೆಕ್ಟಲ್ ಪ್ರೋಲಾಪ್ಸ್” ಹಾಗೂ ಗ್ಯಾಂಗ್ರಿನಸ್ ಮ್ಯುಕೋಸಾ” ಎಂದು ದೃಢಪಟ್ಟಿದ್ದು, ತುರ್ತು ಶಸ್ತ್ರಚಿಕಿತ್ಸೆ ಅಗತ್ಯವೆಂದು ವೈದ್ಯರು ನಿರ್ಧರಿಸಿದರು.

ಶಸ್ತ್ರಚಿಕಿತ್ಸೆಯ ವೇಳೆ ಎರಡೂ ಗ್ಲೂಟಿಯಲ್ ಭಾಗಗಳಲ್ಲಿ ಪ್ರೆಶರ್ ಸೋರ್‌ಗಳು ಹಾಗೂ ಕರುಳಿನ ಭಾಗ ಕೊಳೆತು ಹೋಗಿರುವುದು ಕಂಡುಬಂದಿತು. ಅಗತ್ಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ನಂತರ ರೋಗಿ ಉತ್ತಮವಾಗಿ ಚೇತರಿಸಿಕೊಂಡು, ಈಗ ಸಂಪೂರ್ಣವಾಗಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಕಳೆದ ಒಂದೂವರೆ ವರ್ಷಗಳಿಂದ ನರದ ಸಮಸ್ಯೆಯಿಂದ ಬಳಲುತ್ತಿದ್ದು, ಅದರ ಪರಿಣಾಮವಾಗಿ ಮಲ ವಿಸರ್ಜನೆ ಮಾಡುವಾಗ ಕರುಳು ಹೊರಬರುತ್ತಿತ್ತು ಎಂಬುದು ತಿಳಿದುಬಂದಿದೆ. ಕಳೆದ ಮೂರು ತಿಂಗಳಿನಿಂದ ಸಮಸ್ಯೆ ಗಂಭೀರಗೊಂಡಿತ್ತು. ಈ ವೇಳೆ ನ್ಯೂರೋ ಸರ್ಜನ್ ಡಾ. ದೀಪಕ್ ಅರಸಿಕೆರೆ ಅವರು ನರ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ನೀಡಿದ್ದಾರೆ.

ಈ ಕುರಿತು ಡಾ. ಕೌಶಿಕ್ ಸುಬ್ರಮಣಿಯನ್ ಅವರು ಮಾತನಾಡಿ, “ಇಂತಹ ಕಾಯಿಲೆಗಳನ್ನು ನಿರ್ಲಕ್ಷ್ಯ ಮಾಡಿದರೆ ಜೀವಕ್ಕೆ ಅಪಾಯ ಉಂಟಾಗಬಹುದು. ಸಮಯಕ್ಕೆ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯ,” ಎಂದು ಹೇಳಿದರು.

Ramesh Babu

Journalist

Recent Posts

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

10 hours ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

14 hours ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

17 hours ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

1 day ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

1 day ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

2 days ago