ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ ತಂಡಕ್ಕೆ ಉತ್ತಮ ಆರಂಭ ನೀಡಿದರು.
ಮೊದಲ ವಿಕೆಟ್ ಗೆ 141 ರನ್ ಗಳ ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…