Categories: ಐಪಿಎಲ್

ಸಂಘಟಿತ ಹೋರಾಟ: ಪ್ಲೇ ಆಫ್ ಗೆ ಲಗ್ಗೆ ಇಟ್ಟ ಸಿ.ಎಸ್.ಕೆ

 

ಆರಂಭಿಕ ಆಟಗಾರರ ಅಬ್ಬರದ ಬ್ಯಾಟಿಂಗ್ ಹಾಗೂ ದೀಪಕ್ ಚಹರ್ ಮಾರಕ ಬೌಲಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸಿ ಎಸ್ ಕೆ ಅಧಿಕೃತವಾಗಿ ಪ್ಲೇ ಆಫ್ ಪ್ರವೇಶಿಸಿದೆ.

ಟಾಸ್ ಗೆದ್ದು ಬ್ಯಾಟಿಂಗ್ ಆರಿಸಿದ ನಾಯಕ ಮಹೇಂದ್ರ ಸಿಂಗ್ ಧೋನಿಯ ನಿರ್ಧಾರಕ್ಕೆ ತಕ್ಕಂತೆ ಅರಂಭಿಕರಿಬ್ಬರು ದಿಟ್ಟ ಉತ್ತರ ನೀಡಿದರು. ಯುವ ಆಟಗಾರ ಋತುರಾಜ್ ಗಾಯಕ್ವಾಡ್ (79) ಹಾಗೂ ಡೆವೊನ್ ಕಾನ್ವೆ (87) ಅಬ್ಬರದ ಬ್ಯಾಟಿಂಗ್ ಮೂಲಕ  ತಂಡಕ್ಕೆ ಉತ್ತಮ ಆರಂಭ ನೀಡಿದರು.

ಮೊದಲ ವಿಕೆಟ್ ಗೆ 141 ರನ್ ಗಳ  ಜೊತೆಯಾಟ ಮೂಡಿಬಂದಿತು. ಇದರ ಜೊತೆಯಲ್ಲಿ ಮಾಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಗಳು ಕೂಡ ಈ ಪಂದ್ಯದಲ್ಲಿ ಮಿಂಚಿದರು. ಶಿವಂ ದುಬೆ (22) ಹಾಗೂ ಜಡೇಜಾ (20) ಅಬ್ಬರದ ಆಟದ ನೆರವಿನಿಂದ ಸಿ ಎಸ್ ಕೆ ಮೂರು ವಿಕೆಟ್ ಗಳ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತವನ್ನು ಪೇರಿಸಿತು.

ಡೆಲ್ಲಿ ಪರವಾಗಿ ಸಕಾರಿಯ, ನೋಕಿಯಾ, ಮತ್ತು ಖಲೀಲ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದರು. 224 ರನ್ ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ.

ಆರಂಭಿಕ ಆಟಗಾರ ಪೃಥ್ವಿ ಷಾ(5) ಬೇಗನೆ ತಮ್ಮ ವಿಕೆಟ್ ಒಪ್ಪಿಸಿದರು. ಒಂದೆಡೆ ನಾಯಕ ಡೇವಿಡ್ ವಾರ್ನರ್(86) ಆಕರ್ಷಕ ಅರ್ಧ ಶತಕ ಗಳಿಸುವ ಮೂಲಕ ಏಕಾಂಗಿ ಹೋರಾಟ ನಡೆಸಿದರು. ಆದರೆ  ಉಳಿದ ಯಾವುದೇ ಬ್ಯಾಟರ್ ಗಳಿಂದ ಉತ್ತಮ ಆಟ ಮೂಡಿಬರಲಿಲ್ಲ.

ಸಿ ಎಸ್ ಕೆ ತಂಡದ ಬೌಲರ್ ಗಳ ಉತ್ತಮ ಬೌಲಿಂಗ್ ನೆರವಿನಿಂದ 20 ಓವರ್ ಗಳ ಅಂತ್ಯಕ್ಕೆ ಡೆಲ್ಲಿ ಕ್ಯಾಪಿಟಲ್ ಕೇವಲ 146 ರನ್ ಗಳನ್ನಷ್ಟೇ ಗಳಿಸಲು ಸಾಧ್ಯವಾಯಿತು. ದೀಪಕ್ ಚಾಹರ್ 3 ವಿಕೆಟ್,  ಪತಿರಾಣಾ ಹಾಗೂ ತೀಕ್ಷಣ ತಲಾ 2 ವಿಕೆಟ್ ಪಡೆದು ತಂಡದ ಗೆಲುವಿಗೆ ಕಾರಣರಾದರು. ಯುವ ಆಟಗಾರ ರುತುರಾಜ್ ಗಾಯಕ್ವಾಡ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Ramesh Babu

Journalist

Recent Posts

ನೊಬೆಲ್ ಪ್ರಶಸ್ತಿ ಮತ್ತೆ ಮನಸ್ಸು ಮತ್ತು ಸಮಾಜ ಪುನ:ಶ್ಚೇತನಗೊಳ್ಳುವಂತೆ ಮಾಡಲಿ

ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…

3 hours ago

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳ ಸರಣಿ: ಜನರಲ್ಲಿ ಆತಂಕ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…

17 hours ago

ರೈತರಿಗೆ ನೋವಾಗುವ ಯಾವುದೇ ತೀರ್ಮಾನ ಇಲ್ಲ; ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಶಾಶ್ವತ ಪರಿಹಾರ- ಸಚಿವ ಚಲುವರಾಯಸ್ವಾಮಿ

ರೈತರಿಗೆ ನೋವಾಗುವ ಯಾವುದೇ ತೀರ್ಮಾನಗಳನ್ನು ಸರ್ಕಾರ ತೆಗೆದುಕೊಳ್ಳುವುದಿಲ್ಲ. ರೈತರ ಸಹಕಾರವಿದ್ದರೆ, ಅವರಿಗೆ ಅಗತ್ಯವಿರುವ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ ಎಂದು…

21 hours ago

ಒಂದೇ ದಿನ ಪ್ರತ್ಯೇಕ ಘಟನೆ: ಮೂವರು ಬಜರಂಗದಳ ಕಾರ್ಯಕರ್ತರು ಸಾವು

ದೇವನಹಳ್ಳಿ: ತುರ್ತು ರಕ್ತದ ಅವಶ್ಯಕತೆ ಹಿನ್ನೆಲೆಯಲ್ಲಿ ರಕ್ತದಾನ ಮಾಡಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು…

22 hours ago