ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು-ಎಂ.ಅನಿತಾ

ದೊಡ್ಡಬಳ್ಳಾಪುರ: ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು ಅಭಿವೃದ್ಧಿಯತ್ತ ಸಾಗಬೇಕಾದರೆ ಸಂಘಕ್ಕಕೆ ಹಾಲಿನ ಪೂರೈಕೆ ಹೆಚ್ಚಾಗಬೇಕು ಎಂದು ದೊಡ್ಡಬಳ್ಳಾಪುರದ ಶೀತಲ ಕೇಂದ್ರದ ವಿಸ್ತರಣಾಧಿಕಾರಿ ಎಂ.ಅನಿತಾ ಹೇಳಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಮೋಪರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ 2023 – 2024 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಿತು.

ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಅವರು, ಶುದ್ಧವಾದ ಗುಣಮಟ್ಟದ ಹಾಲನ್ನು ಸರಬರಾಜು ಮಾಡಿದರೆ ಸಂಘವು ಉಳಿಯುತ್ತದೆ ಮತ್ತು ಸರ್ಕಾರದ ಪ್ರೋತ್ಸಾಹ ಧನ ರೈತರಿಗೆ ಬರಲು ಅನುಕೂಲವಾಗುತ್ತದೆ, ರೈತರು ಕೃಷಿ ಚಟುವಟಿಕೆ ಮತ್ತು ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡರೆ  ಯಾವುದೇ ನಷ್ಟ ಇಲ್ಲ, ರಾಸುಗಳಿಗೆ ಯಾವಾಗಲೂ ಶುದ್ಧ ಕುಡಿಯುವ ನೀರನ್ನು ಒದಗಿಸಬೇಕು, ಹಾಲು ಹಿಂಡಲು ಮತ್ತು ಹಾಲನ್ನು ಸಂಘಕ್ಕೆ ತರಲು ಸ್ಟೇನ್‌ಲೆಸ್ ಸ್ಟೀಲ್ ಪಾತ್ರೆಗಳನ್ನೇ ಬಳಸಿದರೆ ಬಹಳ ಒಳ್ಳೆಯದು, ಹಾಲು ಕರೆಯುವ ಮೊದಲು ಕೈಗಳನ್ನು ಸಾಬೂನಿನಿಂದ ತೊಳೆದುಕೊಂಡು ಕೆಚ್ಚಲನ್ನು ಶುದ್ಧ ನೀರಿನಿಂದ ತೊಳೆದು ಒಣ ಬಟ್ಟೆಯಿಂದ ಒರೆಸಬೇಕು ಎಂದರು.

ಸಂಘದ ಅಧ್ಯಕ್ಷರಾದ ಮನಿಅಂಜಿನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದು ನಂದಿನಿ  ಹಾಲು ಮತ್ತು ಹಾಲಿನ ಉತ್ಪನ್ನಗಳು ಹೊರ ರಾಜ್ಯಗಳಿಗೆ ಅಲ್ಲದೆ ಪಾಶ್ಚಾತ್ಯ ದೇಶಗಳಲ್ಲಿ ಮಾರುಕಟ್ಟೆಯನ್ನು ವಿಸ್ತರಿಸಿರುವುದು ನಂದಿನಿ ಹಾಲಿನ ಉತ್ಕೃಷ್ಟತೆಗೆ ಸಾಕ್ಷಿ, ಆರೋಗ್ಯವಂತ ರಾಸುವಿನ ಶುದ್ಧ ಗುಣಮಟ್ಟದ ಹಾಲನ್ನು ಮಾತ್ರ ಸಂಘವು ತೆಗೆದುಕೊಳ್ಳುತ್ತದೆ, ಕೆಚ್ಚಲು ಬಾವು ಇರುವ ಹಾಲನ್ನು ಸಂಘಕ್ಕೆ ಸರಬರಾಜು ಮಾಡಬಾರದು, ಉತ್ತಮ ಗುಣಮಟ್ಟದ ಹಾಲಿಗೆ ಮಾತ್ರ 5 ರೂ. ಪ್ರೋತ್ಸಾಹ ಧನ ಬರುತ್ತದೆ, ಬಮೂಲ್ ನಿಂದ ರೈತರಿಗೆ ಜೋಳ, ರಾಸುಗಳಿಗೆ ಮ್ಯಾಟ್, ಮೇವು ಕತ್ತರಿಸುವ ಯಂತ್ರಗಳು, ಹಾಲು ಕರೆಯುವ ಯಂತ್ರಗಳು, ಸಂಘದ ಕಟ್ಟಡ ಕಟ್ಟಲು ಕೆ.ಎಂ.ಎಫ್ ನಿಂದ ಅನುದಾನಗಳು, ಬೆಂಗಳೂರು ಹಾಲು ಒಕ್ಕೂಟದಿಂದ ಅನುದಾನಗಳು, ರೈತರ ಮಕ್ಕಳಿಗೆ  ಪ್ರತಿಭಾ ಪುರಸ್ಕಾರ,ನೂತನ ಕಟ್ಟಡಗಳಿಗೆ  ಪೀಠೋಪಕರಣಗಳು, ಪಶು ಆಹಾರ,   ಸಂಘದ ಒಳಿತಿಗಾಗಿ ಸಾಲ ಸೌಲಭ್ಯ ಮತ್ತಿತರ ಸೇವೆ, ಸೌಲಭ್ಯಗಳನ್ನು ರೈತರು ಮತ್ತು ಸಂಘಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಘದ ಮುಖ್ಯಕಾರ್ಯನಿರ್ವಾಹಕ ಡಾ.ಎಂ ಚಿಕ್ಕಣ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಲೆಕ್ಕಪರಿಶೋಧನಾ ವರದಿಯನ್ನು ಮಂಡಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಹನುಮಂತ ಗೌಡ, ನಿರ್ದೇಶಕರಾದ ಎಂ.ರಾಮಪ್ಪ, ಎಂ.ಮಾರಪ್ಪ, ಕೃಷ್ಣಪ್ಪ, ಮುನಿಕೃಷ್ಣ, ಅಕ್ಕಯಮ್ಮ, ನಾರಾಯಣಪ್ಪ, ವೆಂಕಟಲಕ್ಷ್ಮಮ್ಮ, ಅಕ್ಕಯಮ್ಮ, ಭಾಗ್ಯಮ್ಮ, ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ಮಕ್ಕಳ ಸಂಕಷ್ಟದ ಬದುಕಿಗೆ ಮುಕ್ತಿ: ಪಾಲಕರಿದ್ದರೂ ಅನಾಥರಂತಿದ್ದ ಮೂವರು ಮಕ್ಕಳ ರಕ್ಷಣೆ

ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…

12 hours ago

ಸಿನಿಮಾ…. ಸೋಲು, ಗೆಲುವಿನ ಸುತ್ತಾ…..

ಟಾಕ್ಸಿಕ್ ಎಂಬ ಸಿನಿಮಾ ಪ್ರೇಕ್ಷಕರನ್ನು ತಲುಪುವಲ್ಲಿ ವಿಫಲವಾದ ಕೆಲವೇ ದಿನಗಳ ನಂತರ ಪ್ರೇಮದ ಊರಲಿ ಎಂಬ ಸಿನಿಮಾ ಸ್ವಲ್ಪ ಮಟ್ಟಿಗೆ…

18 hours ago

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ವಿವರ

1 day ago

ಸರ್ಕಾರಿ ಗೋಮಾಳ ಒತ್ತುವರಿ ಮಾಡಿದವರು ಎಷ್ಟೇ ಪ್ರಭಾವಿಗಳಾಗಿದ್ದರೂ ಕಾನೂನು ಪ್ರಕಾರ ಕ್ರಮ: ನಕಲಿ ಭೂದಾಖಲೆ ಸೃಷ್ಟಿ ಹಾಗೂ ಅಕ್ರಮ ಖಾತೆ ಬದಲಾವಣೆ ಕಂಡುಬಂದರೆ ಕಠಿಣ ಕ್ರಮ- ಕಂದಾಯ ಸಚಿವ ಡಾ.ಜಿ ಪರಮೇಶ್ವರ್

ಸಾರ್ವಜನಿಕರ ಕೆಲಸಗಳು ತಾಲೂಕು ಕಚೇರಿಗಳಲ್ಲಿ ಯಾವುದೇ ವಿಳಂಬವಿಲ್ಲದೆ ನಡೆಯಬೇಕು. ಕಂದಾಯ ದಾಖಲೆಗಳ ನಿರ್ವಹಣೆ, ಭೂಮಿಗೆ ಸಂಬಂಧಿಸಿದ ಅರ್ಜಿಗಳ ವಿಲೇವಾರಿ ಹಾಗೂ…

1 day ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಾರ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶ

ಅ.07-10-2026: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ, ಚೆಕ್‌-ಇನ್ ಬ್ಯಾಗೇಜ್‌ನಲ್ಲಿ ಅಡಗಿಸಿಟ್ಟಿದ್ದ 942 ಗ್ರಾಂ…

1 day ago

ದೇವನಹಳ್ಳಿ ತಹಶೀಲ್ದಾರ್ ಕಚೇರಿಗೆ ಸಚಿವ ಜಿ. ಪರಮೇಶ್ವರ್ ದಿಢೀರ್ ಭೇಟಿ

ದೇವನಹಳ್ಳಿ: ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

1 day ago