ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ 2024-25ನೇ ಸಾಲಿನಲ್ಲಿ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿರುವ ಅರ್ಹ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಚಾರಿ ಕುರಿಗಾರರ ಗುರುತಿನ ಚೀಟಿ ಪಡೆಯಲು, ಕನಿಷ್ಠ 20ಕ್ಕಿಂತ ಹೆಚ್ಚು ಕುರಿ/ಮೇಕೆಗಳನ್ನು ಹೊಂದಿದ್ದಲ್ಲಿ ಅರ್ಹರಿರುತ್ತಾರೆ. ಸಂಚಾರಿ ಕುರಿಗಾರರು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ/ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆಗಳ ಪಶು ವೈದ್ಯಾಧಿಕಾರಿಗಳು/ಮುಖ್ಯ ಪಶು ವೈದ್ಯಾಧಿಕಾರಿಗಳನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು ಹಾಗೂ ಸಂಬಂಧಿಸಿದ ಪಶು ವೈದ್ಯಾಧಿಕಾರಿಗಳಿಂದ ಕನಿಷ್ಠ 20 ಕುರಿ/ಮೇಕೆಗಳನ್ನು ಹೊಂದಿರುವ ದೃಢೀಕರಣ ಪತ್ರ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅದೇ ಪಶು ಚಿಕಿತ್ಸಾಲಯ/ಪಶು ಆಸ್ಪತ್ರೆ/ಕಛೇರಿಗೆ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ಉಪ ನಿರ್ದೇಶಕರ ಕಛೇರಿ, ಬೆಂಗಳೂರು ವಿಭಾಗ, ಮೊಬೈಲ್ ಸಂಖ್ಯೆ: 9740171450 ಕಛೇರಿ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.