ಸಂಚಾರಿ ನಿಯಮ ಪಾಲಿಸಿ ಅಪಘಾತ ತಪ್ಪಿಸಿ- ಪ್ರೀತಂ ಶ್ರೇಯಕರ

ಶಾಲೆಗಳಿಗೆ ಮಕ್ಕಳನ್ನು ಕರೆದೊಯ್ಯುವಾಗ ಚಾಲಕರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲನೆ ಮಾಡಲೇಬೇಕು. ನಿಗದಿತ ಸ್ಥಳಗಳಲ್ಲಿ ಮಾತ್ರ ನಿಲುಗಡೆ ಮಾಡುವ ಮೂಲಕ ಸುವ್ಯವಸ್ಥೆ ಕಾಪಾಡಬೇಕು ಎಂದು ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಪ್ರೀತಂ ಶ್ರೇಯಕರ ಸೂಚಿಸಿದರು.

ನಗರ ಪೊಲೀಸ್ ಠಾಣೆಯಲ್ಲಿ ದೊಡ್ಡಬಳ್ಳಾಪುರ ನಗರ ಮತ್ತು ಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲಾ ಶಾಲೆಗಳ ಬಸ್ ಡ್ರೈವರ್‌ ಗಳು ಮತ್ತು ಶಾಲಾ ಆಡಳಿತ ವರ್ಗದವರ ಸಭೆಯಲ್ಲಿ ಅವರು ಮಾತನಾಡಿ, ಮಕ್ಕಳನ್ನು ಶಾಲೆಗೆ ಹಾಗೂ ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುವಾಗ ಜವಾಬ್ದಾರಿಯಿಂದ ವಾಹನ ಚಲಾಯಿಸಬೇಕು ಎಂದು ಖಡಕ್ ಸೂಚನೆ ನೀಡಿದರು.

ನಂತರ ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹರೀಶ್ ಮಾತನಾಡಿ, ವಾಹನಗಳನ್ನು ಒನ್ ವೇ ಹಾಗೂ ರಾಂಗ್ ಸೈಡ್ ಓವರ್ ಟೆಕ್ ಮಾಡಬಾರದು. ಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ್ದಲ್ಲಿ ಅಪಘಾತ ಸಂಭವಿಸುವುದನ್ನು ತಡೆಗಟ್ಟಬಹುದು ಎಂದರು.

One thought on “ಸಂಚಾರಿ ನಿಯಮ ಪಾಲಿಸಿ ಅಪಘಾತ ತಪ್ಪಿಸಿ- ಪ್ರೀತಂ ಶ್ರೇಯಕರ

Leave a Reply

Your email address will not be published. Required fields are marked *